Sat. Nov 2nd, 2024

ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿದರೆ ಕ್ರಮ ಗ್ಯಾರಂಟಿ

Share this with Friends

ಬೆಂಗಳೂರು, ಜೂ.19: ವಾಹನ‌ ಸವಾರರೇ ಎಚ್ಚರ,ಕಣ್ಣು ಕುಕ್ಕುವ ದೀಪಗಳನ್ನು ಅಳವಡಿಸಿ ಸಂಚರಿಸಿದರೆ ಕ್ರಮ ಎದುರಿಸಬೇಕಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು‌ ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು ಜುಲೈ ತಿಂಗಳಿಂದ ಕಠಿಣ ಕ್ರಮ ಗ್ಯಾರಂಟಿ.

ಹೀಗೆ ವಾಹನಗಳಲ್ಲಿ ಹೆಚ್ಚು
ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿ ಸಂಚರಿಸುದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆ ಆಗುತ್ತದೆ.

ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿದೆ, ಈ ಪೈಕಿ ಭಾರಿ ವಾಹನಗಳಾದ ಲಾರಿ, ಟ್ರಕ್, ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಸಿರುತ್ತಾರೆ.

ಹಾಗಾಗಿ ಇತರ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆಯಾಗು ತ್ತದೆ. ಎಲ್ಲಾ ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಅಳವಡಿಸಬೇಕಾಗಿರುವ ಹೆಡ್‌ ಲೈಟ್‌ಳನ್ನೇ ಅಳವಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ, ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆ ಕಲಂ 177 ರಡಿ ಪ್ರಕರಣಗಳನ್ನು
ದಾಖಲಿಸಲಾಗುತ್ತದೆ‌ ಎಂದು ಅವರು ಎಚ್ಚರಿಸಿದ್ದಾರೆ.

ಆದ್ದರಿಂದ ಘಟಕಾಧಿಕಾರಿಗಳು ತಮ್ಮ ತಮ್ಮ ಘಟಕಗಳಲ್ಲಿ ಸಂಚರಿಸುವ ವಾಹನಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವುದು ಕಂಡುಬಂದಲ್ಲಿ ಅಂತಹ ವಾಹನ ಚಾಲಕರ ವಿರುವ ಜುಲೈ ಮಾಹೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಪ್ರಕರಣಗಳನ್ನು ದಾಖಲಿಸುವಂತೆ ಅಲೋಕ್ ಕುಮಾರ್ ಸೂಚಿಸಿದ್ದಾರೆ.


Share this with Friends

Related Post