Sat. Nov 2nd, 2024

2006ರ ಭಾಗ್ಯಲಕ್ಷ್ಮೀ ಯೋಜನೆಗೆ 18 ವರ್ಷ, ಹೆಣ್ಣು ಮಕ್ಕಳ ಖಾತೆಗೆ 1 ಲಕ್ಷ : ಇದು ಹೆಚ್ಡಿಕೆ- ಬಿಎಸ್ವೈ ಸಮ್ಮಿಶ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಫಲ

Share this with Friends

ಬೆಂಗಳೂರು, ಜೂ.21: 18 ವರ್ಷದ ಹಿಂದೆ ಅಂದರೆ 2006ರಲ್ಲಿ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಾಗ ಹೆಣ್ಣು ಮಕ್ಕಳಿಗಾಗಿ ಜಾರಿಗೆ ತಂದ ಭಾಗ್ಯಲಕ್ಷ್ಮೀ ಯೋಜನೆ ಈಗ ಮೆಚ್ಯೂರಿಟಿ ಹಂತಕ್ಕೆll ತಲುಪಿದೆ.

ನಿಜಕ್ಕೂ ಈ ಯೋಜನೆ ಅತ್ಯಂತ ಉತ್ತಮವಾಗಿದ್ದು ಅರ್ಹ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಬಹಳ ಅನುಕೂಲವಾಗಿದೆ.

ಅಂದು ಈ ಯೋಜನೆಯಡಿ ನೋಂದಾಯಿಸಿಕೊಂಡವರು ಇನ್ನೆರಡು ತಿಂಗಳಲ್ಲಿ ತಲಾ ಒಂದು ಲಕ್ಷ ರೂ ಲಾಭ ಪಡೆಯಲಿದ್ದಾರೆ.

ರಾಜ್ಯದಲ್ಲಿ ಈ ಯೋಜನೆಯಡಿ ನೋಂದಾಯಿಸಿದ ಹದಿನೆಂಟು ವರ್ಷ ಪೂರ್ಣಗೊಂಡ ಏಪ್ರಿಲ್‌ ಮತ್ತು ಮೇ ತಿಂಗಳ ಅಂತ್ಯಕ್ಕೆ ಈ ಬಾಲಕಿಯರು ಯೋಜನೆಯ ಮೆಚ್ಯೂರಿಟಿ ಬೆನಿಫಿಷರ್‌ಗೆ ಅರ್ಹರಾಗಿದ್ದು, ಈ ಹಣ ಇನ್ನೆರಡು ತಿಂಗಳಲ್ಲಿ ಅರ್ಹ ಫಲಾನುಭವಿಗಳ ಖಾತೆಗೆ ಆದ್ಯತೆ ಮೇರೆಗೆ ಜಮೆ ಆಗಲಿದೆ.

ಈಗಾಗಲೇ ಅಗತ್ಯ ದಾಖಲೆಗಳನ್ನು ಇಲಾಖೆಯು ಪಡೆಯಲು ಮುಂದಾಗಿದೆ.

ಲಿಂಗಾನುಪಾತ ಉತ್ತಮ ಪಡಿಸಲು, ಹೆಣ್ಣು ಭ್ರೂಣ ಹತ್ಯೆ ತಡೆಯಲು, ಬಾಲ್ಯ ವಿವಾಹ ಪದ್ಧತಿಗೆ ಬ್ರೇಕ್‌ ಹಾಕಲು, ಹೆಣ್ಣು ಮಗುವಿನ ಶಿಕ್ಷಣ, ಆರೋಗ್ಯ ಮಟ್ಟ ಉತ್ತಮ ಪಡಿಸಿ ಸರ್ವಾಂಗೀಣ ಅಭಿವೃದ್ಧಿಯತ್ತ ಕೊಂಡೊಯ್ಯಲು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಎರಡು ಹೆಣ್ಣು ಮಕ್ಕಳಿಗೆ ಸರಕಾರವು ನಿಶ್ಚಿತ ಠೇವಣಿ ಹೂಡಿ, ಈ ಮಗುವಿಗೆ ಹದಿನೆಂಟು ವರ್ಷ ಪೂರ್ಣಗೊಂಡ ನಂತರ ಬಡ್ಡಿ ಸಹಿತ ಪರಿಪಕ್ವ ಹಣ ನೀಡುವ ಸದುದ್ದೇಶದಿಂದ 2006-07 ರಲ್ಲಿ ಆರಂಭಗೊಂಡಿದ್ದ ಭಾಗ್ಯಲಕ್ಷ್ಮೀ ಯೋಜನೆ ಆರಂಭಗೊಂಡಿತ್ತು.

ಪ್ರಸ್ತುತ ಹದಿನೆಂಟು ವರ್ಷವಾಗಿರುವ ಹಿನ್ನೆಲೆ ಎಲ್ಲ ತಾಲೂಕುಗಳ ಸಿಡಿಪಿಒ ಮೂಲಕ ಇಲಾಖೆಯು ಪರಿಪಕ್ವ
ಹಣ ನೀಡಲು ಈಗಾಗಲೇ ಅರ್ಹರಿಂದ ಅರ್ಜಿ ಮತ್ತು ಅಗತ್ಯ ದಾಖಲೆ ಸಂಗ್ರಹಿಸುತ್ತಿದೆ.

ಈ ಯೋಜನೆಯ ಹಣ ಪಡೆಯಲು ಬಿಪಿಎಲ್‌ ಕಾರ್ಡ್‌, ಶಾಶ್ವತ ಕುಟುಂಬ ಯೋಜನೆ ಅಳವಡಿಸಿಕೊಂಡು ಮೂರು ಮಕ್ಕಳು ಮೀರಿರದಂತಿರಬೇಕು.

ಬಹುಪತಿ-ಪತ್ನಿಯರನ್ನು ಹೊಂದಿದ್ದರೂ ಎರಡು ಹೆಣ್ಣು ಮಕ್ಕಳು ಯೋಜನೆಯಡಿ‌ ಅರ್ಹರಿರುತ್ತಾರೆ.‌

ಫಲಾನುಭವಿ ಮಗು ಕಡ್ಡಾಯವಾಗಿ 8ನೇ ತರಗತಿ ವಿದ್ಯಾಭ್ಯಾಸ ಮಾಡಿದ ದೃಢೀಕರಣ, ಬಾಲ ಕಾರ್ಮಿಕ, ಬಾಲ್ಯ ವಿವಾಹಕ್ಕೆ ಒಳಗಾಗಿರಬಾರದು ಎಂಬ ನಿಯಮಕ್ಕೆ ಬದ್ಧರಾಗಿರುವ ಹೆಣ್ಣು ಮಕ್ಕಳು ಮಾತ್ರ ಈ ಹಣ ಪಡೆಯಲಿದ್ದಾರೆ.


Share this with Friends

Related Post