Thu. Dec 26th, 2024

ವಿಧಾನಸೌಧದ ಎದುರು ಯೋಗೋತ್ಸವ: ಡಿಸಿಎಂ,ರಾಜ್ಯಪಾಲರು ಭಾಗಿ

Share this with Friends

ಬೆಂಗಳೂರು,ಜೂ.21: ರಾಜ್ಯ ಸರ್ಕಾರದ ವತಿಯಿಂದ ವಿಧಾನಸೌಧದ ಎದುರು ಆಯೋಜಿಸಿದ್ದ ʻಯೋಗೋತ್ಸವʼ ಕಾರ್ಯಕ್ರಮದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಡಿಸಿಎಂ ಡಿ.ಕೆ ಶಿವಕುಮಾರ್‌, ರಾಜ್ಯಾಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಚಿವರಾದ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ ಹೊರಟ್ಟಿ, ನಟಿ ಅನು ಪ್ರಭಾಕರ್, ನಟ ಶರಣ್, ಅಶ್ವಿನಿ ನಾಚಪ್ಪ, ಟೀಂ ಇಂಡಿಯಾ ಕ್ರಿಕೆಟಿಗ ಮನೀಷ್ ಪಾಂಡೆ ಪಾಲ್ಗೊಂಡು ಯೋಗ ಪ್ರದರ್ಶನ ಮಾಡಿದರು.

ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ. ಭಾರತೀಯ ಯೋಗ ಪರಂಪರೆ ಇಮನದು ವಿಶ್ವವ್ಯಾಪಿಯಾಗಿದೆ.

ಭಾರತ ಮತ್ತು ಇತರ ದೇಶಗಳ ಸಂಬಂಧವನ್ನು ಆರೋಗ್ಯಪೂರ್ಣವಾಗಿಸುವ ಮಹತ್ವದ ಕಾರ್ಯವಾಗಿ ಯೋಗ ರೂಪುಗೊಂಡಿದೆ.

ಯೋಗವು ಯಾವುದೇ ಜಾತಿ, ಧರ್ಮ, ಮತ ಪಂಥಕ್ಕೆ ಸೀಮಿತವಾಗದೇ ಎಲ್ಲವನ್ನೂ ಎಲ್ಲರನ್ನೂ ಮೀರಿಸುವ ವಿಶ್ವಕುಟುಂಬಿಯಾಗಿ ವಿಶ್ವ ಆರೋಗ್ಯಕ್ಕಾಗಿ ಎಂಬ ನಿಟ್ಟಿನಲ್ಲಿ ಸಾಕಾರಾರಗೊಂಡಿದೆ.


Share this with Friends

Related Post