Mon. Dec 23rd, 2024

ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Share this with Friends

ಬೆಂಗಳೂರು,ಫೆ.14: ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ಸರ್ಕಾರ ತಿಳಿಸಿದೆ.

ವಿಧಾನ ಪರಿಷತ್ ನ ಪ್ರಶ್ನೋತ್ತರ ಅವಧಿಯಲ್ಲಿ ಈ ಕುರಿತು ಕಾಂಗ್ರೆಸ್ ಸದಸ್ಯ ಮಧು ಜಿ ಮಾದೇಗೌಡ ಪ್ರಶ್ನೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉತ್ತರ ನೀಡಿದರು.

ಹೈ ಸೆಕ್ಯುರಿಟಿ‌ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17ಕ್ಕೆ ಗಡುವು ಮುಕ್ತಾಯವಾಗಲಿದೆ,ಆದರೂ 3 ತಿಂಗಳು ಅವಧಿ ವಿಸ್ತರಣೆ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಈಗಾಗಲೇ 18,32,787 ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ, ಶೇ 9.16 ರಷ್ಟು ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ.

ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿರುವುದರಿಂದ 3 ತಿಂಗಳು ಅವಧಿ ವಿಸ್ತರಣೆ ಮಾಡಿ ಆದಷ್ಟು ಬೇಗ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.


Share this with Friends

Related Post