Wed. Dec 25th, 2024

ಸೂರಜ್ ರೇವಣ್ಣ ಅರೆಸ್ಟ್

Share this with Friends

ಹಾಸನ,ಜೂ.23: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಕೇಸ್‌ ದಾಖಲಾಗಿತ್ತು.

ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್‌ಪಿಗೂ ದೂರಿನ ಪ್ರತಿಯನ್ನು ಇ-ಮೇಲ್ ಮಾಡಿದ್ದ. ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.

ತನ್ನ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಸಂತ್ರನ ವಿರುದ್ಧ ಪ್ರತಿದೂರು ನೀಡಲು ಸಂಜೆ 6 ಗಂಟೆ ವೇಳೆಗೆ ಹಾಸನದ ಸೆನ್‌ ಪೊಲೀಸ್‌ ಠಾಣೆಗೆ ಸೂರಜ್ ಬಂದಿದ್ದರು.

ಅಲ್ಲಿಯೇ ಅವರನ್ನು ಪೊಲೀಸರು ಸರಿರಾತ್ರಿ ವರೆಗೂ ವಿಚಾರಣೆ ನಡೆಸಿದ್ದರು. ಬಳಿಕ ಸೂರಜ್‌ ಜೊತೆಗೆ ಯಾವುದೋ ಸ್ಥಳಕ್ಕು ಹೋಗಿ ಮಾಹಿತಿ ಕಲೆಹಾಕಿ ಬಂದಿದ್ದರು.

ಪ್ರಕರಣದ ತನಿಖಾಧಿಕಾರಿ ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌ ಅವರು ಸೂರಜ್‌ ರೇವಣ್ಣ ಅವರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದರು.ನಂತರ ಹೆಚ್ಚಿನ ವಿಚಾರಣೆಗಾಗಿ‌ ಸೂರಜ್ ಅವರನ್ನು‌ ಮುಂಜಾನೆ 4.30 ರ ವೇಳೆಗೆ ಬಂಧಿಸಿದ್ದಾರೆ.

ಆನಂತರ ಅವರಿಗೆ ವೈದ್ಯಕೀಯ‌ ಚಿಕಿತ್ಸೆ ಮಾಡಿಸಲಾಗಿದೆ.


Share this with Friends

Related Post