Sat. Nov 2nd, 2024

ಸೂರಜ್ ರೇವಣ್ಣ ಪ್ರಕರಣ‌ ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ

Share this with Friends

ಬೆಂಗಳೂರು, ಜೂ.23: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.

ನಿನ್ನೆಯಷ್ಟೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸೂರಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ಇದುವರೆಗೆ ದೂರು ಬಂದಿಲ್ಲ ದೂರು ದಾಖಲಾದರೆ ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ಪೊಲೀಸರು ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದರು.

ಇಂದು ಮುಂಜಾನೆ ಸೂರಜ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ ಜೊತೆಗೆ ಈಗಾಗಲೇ ಅವರನ್ನು ಬೆಂಗಳೂರಿಗೆ ಕರೆತಂದಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೂರಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ, ಹಾಗಾಗಿ ಸೂರಜ್ ರೇವಣ್ಣ ಅವರನ್ನು ಇಂದು ಮುಂಜಾನೆ ಬಂದಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಆರ್. ಹಿತೇಂದ್ರ ಅವರು ಸಿಐಡಿ ವಿಶೇಷ ಘಟಕ ಮತ್ತು ಆರ್ಥಿಕ ಅಪರಾಧಗಳ ವಿಭಾಗಕ್ಕೆ ತುರ್ತು ಸಂದೇಶವನ್ನು ರವಾನೆ ಮಾಡಿದ್ದು, ಹಾಸನ ಜಿಲ್ಲೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ತೆಗೆದುಕೊಳ್ಳಬೇಕೆಂದು ಸೂಚಿಸಿದ್ದಾರೆ.

ಈ ಕುರಿತು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ಅವರು ಮಾಹಿತಿ ನೀಡಿದ್ದಾರೆ ಜತೆಗೆ ಕೂಡಲೇ ಪ್ರಕರಣ ಸಂಬಂಧದ ಫೈಲನ್ನು ಸಿಐಡಿ ತನಿಖಾಧಿಕಾರಿಗಳಿಗೆ ಖುದ್ದಾಗಿ ನೀಡುವಂತೆಯೂ ಸೂಚಿಸಿದ್ದಾರೆ.


Share this with Friends

Related Post