ಬೆಂಗಳೂರು, ಜೂ.23: ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸಿಐಡಿ ಪೊಲೀಸರು ಇನ್ನೂ ಅಧಿಕೃತವಾಗಿ ಸೂರಜ್ ರೇವಣ್ಣ ಪ್ರಕರಣವನ್ನು ತೆಗೆದುಕೊಂಡಿಲ್ಲದ ಕಾರಣ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.
ಹಾಸನ ಪೊಲೀಸರು ಭಾನುವಾರ ರಾತ್ರಿ ಸುಮಾರು ಎಂಟು ಗಂಟೆ ವೇಳೆಗೆ ಬೆಂಗಳೂರಿನ ಕೋರಮಂಗಲದಲ್ಲಿರುವ 42 ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಶಿವಕುಮಾರ್ ಅವರ ನಿವಾಸಕ್ಕೆ ಸೂರಜ್ ಅವರನ್ನು ಹಾಜರುಪಡಿಸಿದರು.
ಸಿಐಡಿಗೆ ಕೇಸ್ ಅಧಿಕೃತವಾಗಿ ಹಸ್ತಾಂತರವಾಗದ ಕಾರಣ ನ್ಯಾಯಾಧೀಶರಾದ ಶಿವಕುಮಾರ್ ಅವರು ಸೂರಜ್ ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ನಾಳೆ ಸಿಐಡಿ ಪ್ರಕರಣವನ್ನು ಕೈಗೆತ್ತಿಕೊಂಡ ನಂತರ ಸೂರಜ್ ರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.