Mon. Dec 23rd, 2024

ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಕಳ್ಳ ಅಂದರ್

Share this with Friends

ಮೈಸೂರು,ಫೆ.14: ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಕಳ್ಳನನ್ನು ಮೈಸೂರಿನ ನಜರಬಾದ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ 9 ಲಕ್ಷ ರೂ ಮೌಲ್ಯದ ಒಟ್ಟು 20 ದ್ವಿಚಕ್ರ ವಾಹನಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಗಸ್ತಿನಲ್ಲಿದ್ದಾಗ ಆರೋಪಿಯು ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ.

ಆಗ ಪೋರಂ ಮಾಲ್ ಬಳಿ ಡಿಯೋ ಬೈಕ್ ನಲ್ಲಿ ಸಾಗುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಮೈಸೂರು, ಮಂಡ್ಯ, ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದಿರುವುದಾಗಿ ಆರೋಪಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ.

ಮೈಸೂರಿನ ನಜರಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9, ಎನ್ ಆರ್, ಲಷ್ಕರ್, ಕೆ ಆರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದೊಂದು, ಮಂಡ್ಯ ಪಶ್ಚಿಮ ಠಾಣೆ ವ್ಯಾಪ್ತಿಯಲ್ಲಿ 4, ಮಂಡ್ಯ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಹಾಗೂ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಒಂದು ದ್ವಿಚಕ್ರ ವಾಹನ ಕದ್ದಿದ್ದಾಗಿ‌ ಆರೋಪಿ ಒಪ್ಪಿಕೊಂಡಿದ್ದಾನೆ


Share this with Friends

Related Post