Tue. Dec 24th, 2024

ಜೂ. 30 ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಲೋಕಾರ್ಪಣೆ

Share this with Friends

ಬೆಂಗಳೂರು, ಜೂ.24: ಇದೇ ಜೂ.30 ರಂದು ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಲೋಕಾರ್ಪಣೆಯಾಗಲಿದೆ.

ಅಂದು ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ.

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ, ಕಟ್ಟಡ ಸಮಿತಿ ಅಧ್ಯಕ್ಷರೂ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ. ರಾ. ಗೋವಿಂದು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಚಿವರಾದ ಕೆ.ಎನ್ ರಾಜಣ್ಣ, ಮಧು ಬಂಗಾರಪ್ಪ, ಲೋಕಸಭಾ ಸದಸ್ಯ ಪಿ.ಸಿ ಮೋಹನ್, ಶಾಸಕ ರಿಜ್ವಾನರ್ ಅರ್ಷದ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಭಾರತೀಯ ಚಲನಚಿತ್ರ ರಂಗ ಹಾಗೂ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ರವಿ ಕೊಟ್ಟಾರಕರ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ ಸುರೇಶ್, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಸಂಘದ ನಿಕಟ ಪೂರ್ವ ಅಧ್ಯಕ್ಷ ಡಿ.ಕೆ ರಾಮಕೃಷ್ಣ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.


Share this with Friends

Related Post