Tue. Dec 24th, 2024

ಬೆಂಗಳೂರಿನಲ್ಲಿ ವಿಚಾರಣೆಗೆ ಹಾಜರಾದ‌ ಉದಯನಿಧಿ‌ ಸ್ಟಾಲಿನ್

Share this with Friends

ಬೆಂಗಳೂರು,ಜೂ.25: ಸನಾತನ ಧರ್ಮವನ್ನು ಅವಮಾನಿಸಿದ ಆರೋಪಕ್ಕೆ‌ ಗುರಿಯಾಗಿರುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಇಂದು‌ ವಿಚಾರಣೆಗೆ ಹಾಜರಾದರು.

ಮಂಗಳವಾರ ಬೆಂಗಳೂರಿನ ಮೆಟ್ರೋಪಾಲಿನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದರು.

ಸಾಮಾಜಿಕ ಕಾರ್ಯಕರ್ತ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಉದಯನಿಧಿ ಸ್ಟಾಲಿನ್‌ಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಖುದ್ದು ಹಾಜರಾಗುವಂತೆ ಸೂಚಿಸಲಾಗಿತ್ತು.

ಹಾಗಾಗಿ ಬೆಂಗಳೂರಿಗೆ ಆಗಮಿಸಿದ ಉದಯನಿಧಿ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರಾದರು. ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 4 ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮ ಡೆಂಗಿ, ಮಲೇರಿಯಾ ಹಾಗೂ ಕೊರೋನಾ ಇದ್ದಂತೆ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಅದು ವಿರುದ್ಧವಾಗಿದೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.


Share this with Friends

Related Post