ಮೈಸೂರು,ಜೂ.25: ಫಪಮಾದಕ ವಸ್ತುಗಳ ಸೇವನೆಯಿಂದ ಆಗುವ ಅನಾಹುತಗಳ ಬಗ್ಗೆ ಮೈಸರ ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿಯ ಪೋಸ್ಟರ್ ನೀಡಿ ಜಾಗೃತಿ ಮೂಡಿಸಲಾಯಿತು.
ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಹಾಗೂ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದ ಹಲವಾರು ಕಾಲೇಜುಗಳಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಮಾದಕ ವಸ್ತು ಕಳ್ಳ ಸಾಗಣೆ ಕುರಿತು ಕಾಲೇಜುಗಳಲ್ಲಿ ಕಡ್ಡಾಯವಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕೆಂದು ಮನವಿ ಮಾಡಿದರು.
ಸದ್ವಿದ್ಯಾ ಕಾಲೇಜು, ಮರಿಮಲ್ಲಪ್ಪ ಕಾಲೇಜು, ಟಿಟಿಎಲ್ ಕಾಲೇಜು ,ಶಾರದಾ ವಿಲಾಸ್ ಕಾಲೇಜು, ಡಿ. ಬನುಮಯ್ಯ ಕಾಲೇಜು ಸೇರಿದಂತೆ ಅನೇಕ ಕಾಲೇಜುಗಳಿಗೆ ಪದಾಧಿಕಾರಿಗಳು ಭೇಟಿ ನೀಡಿ ಮಾದಕ ದ್ರವ್ಯ ಸೇವನೆಯಿಂದ ಆಗುವ ಅನಾಹುತಗಳ ಬಗ್ಗೆ ಜಾಗೃತಿಯ ಪೋಸ್ಟರ್ ನೀಡಿ ತಿಳುವಳಿಕೆ ನೀಡಿದರು.
ಈ ವೇಳೆ ಮಾತನಾಡಿದ ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್,
ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಣಿಕೆಯಿಂದ ಸಮಾಜದ ಮೇಲಾಗುವ ಹಾನಿ ಮಾರಣಾಂತಿಕವಾದುದು ಎಂದು ಹೇಳಿದರು.
ಇದರ ಕುರಿತು ಅರಿವು ಮೂಡಿಸಿ ತಡೆಯುವ ಉದ್ದೇಶದಿಂದ 1989 ರಿಂದ ಪ್ರತಿ ವರ್ಷ ಜೂನ್ 26 ರಂದು ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ ಟ್ರಸ್ಟ್ ಪದಾಧಿಕಾರಿಗಳಾದ
ಅಜಯ್ ಶಾಸ್ತ್ರಿ, ರವಿಚಂದ್ರ, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ರಾಕೇಶ್, ದುರ್ಗಾ ಪ್ರಸಾದ್ ,ಸಚಿನ್ ನಾಯಕ್ ಮತ್ತಿತರರು ಹಾಜರಿದ್ದರು.