Tue. Dec 24th, 2024

ಸಂಸದರಿಂದ ಕನ್ನಡದಲ್ಲಿ ಪ್ರಮಾಣ ವಚನ: ಗುರುಪಾದಸ್ವಾಮಿ ಮೆಚ್ಚುಗೆ

Share this with Friends

ಮೈಸೂರು,ಜೂ.25: ಕರ್ನಾಟಕದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಕ್ಕೆ
ಬಿಜೆಪಿ ಮುಖಂಡ ಗುರುಪಾದಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯ ಮೇಲಿನ ಅಭಿಮಾನ ಮತ್ತು ಗೌರವವನ್ನು ದಿಲ್ಲಿಯ ಸಂಸತ್ ಭವನದಲ್ಲಿ ಎತ್ತಿ ಹಿಡಿದಿದ್ದಾರೆ ಎಂದು ಅವರು ಕೊಂಡಾಡಿದ್ದಾರೆ.

ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಡಾ.ಮಂಜುನಾಥ್,ಹೆಚ್.ಡಿ. ಕುಮಾರಸ್ವಾಮಿ, ವಿ.ಸೋಮಣ್ಣ ಮೊದಲಾದ ಸಂಸದರು ಪ್ರಮಾಣ ವಚನವನ್ನು ಕನ್ನಡ ಭಾಷೆಯಲ್ಲಿಯೇ ಅನುವಾದ ಮಾಡಿಕೊಂಡು ಸಂಸತ್ ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದು, ಹೆಮ್ಮೆ ತರುವ ವಿಚಾರ ಎಂದು ಹೇಳಿದ್ದಾರೆ.

ಕರ್ನಾಟಕದಿಂದ ಆಯ್ಕೆಯಾಗಿರುವ ಎಲ್ಲಾ ಸಂಸದರು ಕನ್ನಡ ಭಾಷೆ ಮತ್ತು ಕನ್ನಡ ಪ್ರಾಂತ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಗುರುಪಾದಸ್ವಾಮಿ ಮನವಿ ಮಾಡಿದ್ದಾರೆ.


Share this with Friends

Related Post