Fri. Nov 1st, 2024

ಸಿದ್ದರಾಮಯ್ಯ ಜಾತಿಗಳನ್ನು ಒಡೆಯುತ್ತಿದ್ದಾರೆ – ಅಶೋಕ್ ಆರೋಪ

Share this with Friends

ಚಿಕ್ಕಬಳ್ಳಾಪುರ, ಜೂ.29: ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ಕಾಂಗ್ರೆಸ್‌ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತನಾಡಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಬದಲಾವಣೆ, ಮೂವರು ಉಪ ಮುಖ್ಯ ಮಂತ್ರಿ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ ಎಂದು ಕಿಡಿಕಾರಿದರು.

ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡುವ ಯೋಗ್ಯತೆಯೂ ಇಲ್ಲ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ,ಡೆಂಘೀ ಹರಡಿ ಜನರು ತೊಂದರೆ ಪಡುತ್ತಿದ್ದಾರೆ,ಆದರೂ ಸೂಕ್ತ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದರು.

ಈಗ ಒಕ್ಕಲಿಗರು ಹಾಗೂ ಲಿಂಗಾಯತರು ಮಾತಾಡುತ್ತಿದ್ದಾರೆ. ಮುಂದೆ ಕುರುಬ ಸಮುದಾಯದವರು ಮಾತಾಡುತ್ತಾರೆ. ಜಾತಿಗಳ ನಡುವೆ ಕಾಂಗ್ರೆಸ್‌ ಜಗಳ ಹುಟ್ಟುಹಾಕಿರುವುದು ಒಳ್ಳೆಯದಲ್ಲ, ಜಾತಿಗಳನ್ನು ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಪುನರುಚ್ಛರಿಸಿದರು.

ಒಂದು ಕುಟುಂಬಕ್ಕೆ 2 ಸಾವಿರ ನೀಡುತ್ತೇವೆಂದು ಹೇಳಿದ ಕಾಂಗ್ರೆಸ್‌, 8-10 ಸಾವಿರ ರೂ. ದರೋಡೆ ಮಾಡುತ್ತಿದೆ. ಹಾಲಿನ ದರವನ್ನು ಕಳೆದ ವರ್ಷ 3 ರೂ. ಹೆಚ್ಚಿಸಿ, ಈಗ ಮತ್ತೆ 2 ರೂ. ಹೆಚ್ಚಿಸಿದ್ದಾರೆ,ಜತೆಗೆ ಪೆಟ್ರೋಲ್‌-ಡೀಸೆಲ್‌ ದರವನ್ನು ಏರಿಸಿದ್ದರಿಂದ ಎಲ್ಲದರ ದರಗಳು ಏರಿಕೆಯಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಾದ ಕೂಡಲೇ ಬಸ್‌ ಟಿಕೆಟ್‌ ದರ ಹೆಚ್ಚಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ,ಜನ ಈಗಲೇ ಎಚ್ಚೆತ್ತುಕೊಳ್ಳಬೇಕಿದೆ ಎಂದು ಅಶೋಕ್ ಎಚ್ಚರಿಸಿದರು.


Share this with Friends

Related Post