Mon. Dec 23rd, 2024

ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ:ಡಾ. ರಾಜೇಂದ್ರ ಸೂಚನೆ

Share this with Friends

ಮೈಸೂರು, ಜೂ.30: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು,ಕೂಡಲೇ ಇದರ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಡಿಸಿ, 3493 ಜನರಿಗೆ ಪರೀಕ್ಷೆ ನಡೆಸಿದ್ದು ಇದರಲ್ಲಿ 481 ಜನರಿಗೆ ಡೆಂಗ್ಯೂ ಪ್ರಕರಣಗಳು ಕಂಡು ಬಂದಿದೆ ಎಂದು ತಿಳಿಸಿದರು.

ನಮ್ಮಲ್ಲಿ ಡೆಂಗ್ಯೂ ಪ್ರಕರಣಗಳು ನಿಯಂತ್ರಣದಲ್ಲಿವೆ. ಇದು ಹೆಚ್ಚಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಡೆಂಗ್ಯೂ ಸೊಳ್ಳೆಗಳ ಕಡಿತದಿಂದ ಬರುತ್ತದೆ. ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿ ಆಗುತ್ತವೆ. ಬಸ್ ಡಿಪೊಗಳು, ಚರಂಡಿಗಳು, ಹಳೆಯ ಟೈರ್ ಗಳು, ತೆಂಗಿನ ಚಿಪ್ ಗಳಲ್ಲಿ, ನೀರಿನ ತೊಟ್ಟಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ಸ್ವಚ್ಛತೆ ಕಾಪಾಡಬೇಕು
ನಿಯಮಿತವಾಗಿ ಫಾಗಿಂಗ್ ಮಾಡಿಸಬೇಕು, ಜನರಿಗೆ ಡೆಂಗ್ಯೂ ಕುರಿತು ಅರಿವು ಮೂಡಿಸಬೇಕು.

ಈ ಸಂಬಂಧ ಗ್ರಾಮ ಪಂಚಾಯಿತಿಗಳು, ಪುರಸಭೆ ನಗರಸಭೆ, ಕಾರ್ಯ ನಿರ್ವಹಿಸಬೇಕು. ಶುದ್ಧ ಕುಡಿಯುವ ನೀರು ಪೂರೈಸುತ್ತಿರುವ ಬಗ್ಗೆ ಸಂಬಂದಿಸಿದ ಅಧಿಕಾರಿಗಳು ಪ್ರತಿದಿನ ಪರಿಶೀಲನೆ ನಡೆಸಬೇಕು. ನಿಯಮಿತವಾಗಿ ನೀರಿನ ಟ್ಯಾಂಕ್ ಗಳು ಹಾಗೂ ಓವರ್ ಹೆಡ್ ಟ್ಯಾಂಕ್ ಗಳನ್ನು ಸ್ವಚ್ಛ ಗೊಳಿಸಬೇಕು ಎಂದು ರಾಜೇಂದ್ರ ಆದೇಶಿಸಿದರು.

ಗ್ಯಾಂಬುಷಿಯಾ ಮತ್ತು ಗಂಪ್ಪಿ ಪಿಶ್ ಗಳನ್ನು ನೀರಿನ ತೊಟ್ಟಿಗಳಲ್ಲಿ ಬಿಡಬೇಕು. ಪಾರ್ಕ್ ಮತ್ತು ಜನರು ಹೆಚ್ಚು ಇರುವ ಪ್ರದೇಶಗಳಲ್ಲಿ ಸ್ಪಚತೆ ಕಾಪಾಡಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ಡೆಂಗ್ಯೂ ಕುರಿತು ಆತಂಕ ಬೇಡ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದು ಸಾರ್ವಜನಿಕ ರಿಗೆ ಅವರು ಮನವಿ ಮಾಡಿದರು.

ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿರಿದ್ದರು.


Share this with Friends

Related Post