Mon. Dec 23rd, 2024

ಸಿಎಂ‌ ನಿವಾಸದ ಬಳಿ ಬಿಜೆಪಿ ಬೃಹತ್ ಪ್ರತಿಭಟನೆ

Share this with Friends

ಬೆಂಗಳೂರು,ಜು.3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬುಧವಾರ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.

ಬಿಜೆಪಿ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದ ವೇಳೆ ಸಿಎಂ ನಿವಾಸಕ್ಕೆ ಮುತ್ತಿಗೆಗೂ ಯತ್ನಿಸಲಾಯಿತು.

ಈ ವೇಳೆ ರಾಜ್ಯಾಧ್ಯಕ್ಷ ವಿಜಯೇಂದ್ರ,ಪ್ರತಿಪಕ್ಷ ನಾಯಕರಾದ ಆರ್. ಅಶೋಕ್, ಮಾಜಿ ಸಚಿವರಾದ ಸುರೇಶ ಕುಮಾರ್, ಅರಗಜ್ಞಾನೇಂದ್ರ, ಡಾ.ಅಶ್ವತ್ ನಾರಾಯಣ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ, ಮೈಸೂರು ಮುಡಾ ಹಗರಣ, ವಸತಿ ಇಲಾಖೆಯ ಭ್ರಷ್ಟಾಚಾರ, ಟ್ರ್ಯಾಕ್ಟರ್ ಹಂಚಿಕೆಯಲ್ಲಿ ಹಗರಣ, ಕಿಯೋನಿಕ್ಸ್ ಹಗರಣ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತವನ್ನು ವಿರೋಧಿಸಿ ಇಂದು ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಮೂಲಕ ಬಿಜೆಪಿ ಭಾರೀ ಪ್ರತಿಭಟನೆ ನಡೆಸಿತು.


Share this with Friends

Related Post