Mon. Dec 23rd, 2024

ಅನುಮಾನಕ್ಕೆಡೆ ಮಾಡಿದೆ ಡಿಸಿ ಡಾ.ರಾಜೇಂದ್ರ ದಿಢೀರ್ ವರ್ಗಾವಣೆ

Share this with Friends

ಮೈಸೂರು,ಜು.5: ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಗೆ 50-50 ಅನುಪಾತದಲ್ಲಿ ಸೈಟು ಹಂಚಿಕೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜೇಂದ್ರ ಅವರನ್ನು ಏಕಾಏಕೀ ವರ್ಗಾವಣೆ ಮಾಡಲಾಗಿದೆ ಎಂಬ ಗುಸು,ಗುಸು ಕೇಳಿಬರುತ್ತಿದೆ.

ಈ ಹಗರಣ ಕುರಿತು ಜಿಲ್ಲಾಧಿಕಾರಿಯಾಗಿದ್ದ ರಾಜೇಂದ್ರ ಅವರು 15 ಬಾರಿ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ.

ಆದರೆ ಇವುಗಳಿಗೆ ಯಾವುದೇ ಉತ್ತರ ಬಾರದ ಹಿನ್ನೆಲೆಯಲ್ಲಿ ಈ ಕುರಿತು ರಾಜೇಂದ್ರ ಅವರು ರಾಜ್ಯ ಸರ್ಕಾರ ಹಾಗೂ ಮುಖ್ಯ ಕಾರ್ಯದರ್ಶಿಯವರಿಗೂ ಪತ್ರ ಬರೆದಿದ್ದರು.

ಈ ಪ್ರಕರಣದಲ್ಲಿ ಹಲವು ಅನುಮಾನಗಳು ಉಂಟಾಗಿದ್ದು ನೀತಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದರು ಎಂದು ಹೇಳಲಾಗಿದೆ.

ಈ ವಿಷಯ ಮಾಧ್ಯಮದಲ್ಲಿ ವರದಿಯಾಗುತ್ತಿದ್ದಂತೆ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಡಾ.ಕೆ.ವಿ ರಾಜೇಂದ್ರ ಅವರನ್ನು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ನಿಯುಕ್ತಿ ಮಾಡಲಾಗಿದೆ

ಕೆ.ವಿ.ರಾಜೇಂದ್ರ ಅವರ ಸ್ಥಾನಕ್ಕೆ ಪ್ರಸ್ತುತ ಕರ್ನಾಟಕ ಅರ್ಬನ್ ಇನ್ಫ್ರಾಸ್ಟ್ರಕ್ಚರ್ ಅಂಡ್ ಫೈನಾನ್ಸ್ ಕಾರ್ಪೊರೇಷನ್ ನಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲಕ್ಷ್ಮೀಕಾಂತ ರೆಡ್ಡಿ ಅವರನ್ನು ನಿಯೋಜಿಸಲಾಗಿದೆ.


Share this with Friends

Related Post