Mon. Dec 23rd, 2024

ಬೆಳಗಾವಿಗೆ ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

Share this with Friends

ಬೆಳಗಾವಿ:ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅವರು ಶುಕ್ರವಾರರಂದು ಅಧಿಕಾರ ವಹಿಸಿಕೊಂಡರು.ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು.

ಬಿ.ಟೆಕ್ ಹಾಗೂ ಎಂ.ಬಿ.ಎ.(ಫೈನಾನ್ಸ್), ಎಂ.ಎ.(ಪಬ್ಲಿಕ್ ಪಾಲಿಸಿ) ಪದವೀಧರರಾಗಿರುವ ರೋಷನ್ ಅವರು 2015 ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್ ಅವರು, ಈ ಮುಂಚೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಇನ್ನು ಹಾವೇರಿ ಮತ್ತು ಉತ್ತಕ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ‌.

ಕಳೆದ ಎರಡು ವರ್ಷಗಳಿಂದ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಆಡಳಿತಲ್ಲಿ ಚುರುಕು ತಂದಿದ್ದ ನಿತೇಶ್ ಪಾಟೀಲ ಅವರು, ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಇಲಾಖೆ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಶುಭಕೋರಿದರು. ಇದೇ ವೇಳೆ ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡರು.

ಈ ಸಮಯದಲ್ಲಿ ಪ್ರೊಬೇಷನರಿ ಐ.ಎ.ಎಸ್. ದಿನೇಶ್ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ,‌ಸೇರಿದಂತೆ ಸಿಬ್ಬಂದಿ‌ ವರ್ಗದವರು ಉಪಸ್ಥಿತರಿದ್ದರು.


Share this with Friends

Related Post