Mon. Dec 23rd, 2024

ಬಾಬು ಜಗಜೀವನ ರಾಂ ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದ್ದರು: ಸಿಎಂ

Share this with Friends

ಬೆಂಗಳೂರು, ಜು.6: ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದ ಮಹಾನ್‌ ವ್ಯಕ್ತಿ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು.

ಡಾ.ಬಾಬು ಜಗಜೀವನ ರಾಂ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ದೇಶದಲ್ಲಿ ತೀವ್ರ ಆಹಾರದ ಕೊರತೆಯುಂಟಾಗಿ, ಬೇರೆ ದೇಶಗಳ ಮುಂದೆ ಬೇಡಬೇಕಾದ ಪರಿಸ್ಥಿತಿ ಇತ್ತು. ಹೊಸ ತಳಿಗಳ ಅಭಿವೃದ್ದಿ ಸೇರಿದಂತೆ ಹಲವು ಕ್ರಮಗಳ ಮೂಲಕ ಜಗಜೀವನರಾಂ ಅವರು ಆಹಾರ ಭದ್ರತೆ ಒದಗಿಸಿದರು.

ಜಗಜೀವನರಾಂ ಅವರು ರಕ್ಷಣಾ ಇಲಾಖೆ ಸೇರಿದಂತೆ ಹಲವು ಇಲಾಖೆಯಲ್ಲಿ ಕಾರ್ಯನಿರ್ವಹಿಸಿ ದಕ್ಷ ಆಡಳಿತ ನೀಡಿದ್ದಾರೆ. ಕಾರ್ಮಿಕರ ಪರವಾಗಿ ಅನೇಕ ಕಾಯ್ದೆಗಳನ್ನು ರಚಿಸಿದ ಕೀರ್ತಿ ಅವರದು. ಬಡವರು, ರೈತರು, ಕೂಲಿ ಕಾರ್ಮಿಕರ ಪರವಾಗಿ ನಿರಂತರವಾಗಿ ಅವರು ಹೋರಾಟ ನಡೆಸಿದ್ದಾರೆ. ಅವರು ತೋರಿದ ಹಾದಿಯಲ್ಲಿ ನಡೆಯುವ ಸಂಕಲ್ಪವನ್ನು ಈ ದಿನ ನಾವು ಮಾಡಬೇಕಾಗಿದೆ ಎಂದು ಹೇಳಿದರು.

ಸುಮಾರು 3ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ.ಬಾಬು ಜಗಜೀವನರಾಂ ಭವನವನ್ನು ಜುಲೈ 13ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಸಿಎಂ ಇದೇ‌ ವೇಳೆ‌ ತಿಳಿಸಿದರು.

ಕೇಂದ್ರ ಸರ್ಕಾರ ಆರಂಭಿಸಿದ್ದ ಭಾರತ್‌ ಅಕ್ಕಿ ಯೋಜನೆ ಸ್ಥಗಿತವಾಗಿರುವ ಬಗ್ಗೆ ಪತ್ರಕರ್ತರು ಗಮನ ಸೆಳೆದಾಗ ಚುನಾವಣೆಗೋಸ್ಕರ ಈ ಯೋಜನೆ ಆರಂಭಿಸಿದ್ದರೆಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.


Share this with Friends

Related Post