ಬೆಳಗಾವಿ,ಜು.6: ಮಹಾರಾಷ್ಟ್ರ, ಪಶ್ಚಿಮ ಘಟ್ಟ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು,ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ನಾಲ್ಕು ಸೇತುವೆಗಳು ಮುಳುಗಿವೆ.
ಈ ಭಾಗದ ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ. ಜಿಲ್ಲೆಯ ಹಲವೆಡೆ ರಸ್ತೆಗಳು, ಗ್ರಾಮಗಳು ಮುಳುಗಡೆಯಾಗಿದ್ದು, ಸಂಪರ್ಕ ಕಡಿತಗೊಂಡಿದೆ.ಗ್ರಾಮಸ್ಥರ ನೆರವಿಗೆ ಬರಬೇಕೆಂದು ಅಧಿಕಾರಿಗಳಿಗೆ ಮೊರೆ ಇಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಲ್ಕು ಸೇತುವೆಗಳು ಮುಳುಗಡೆಯಾಗಿವೆ. ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಮಳೆಯಿಂದಾಗಿ ಕೃಷ್ಣಾ ನದಿಗೆ ಸುಮಾರು 55 ಸಾವಿರ ಕ್ಯೂಸೆಕ್ ನೀರು ಬರುತ್ತಿದೆ,ಹಾಗಾಗಿ ಪ್ರವಾಹ ಭೀತಿ ಉಂಟಾಗಿದೆ.
ನಿಪ್ಪಾಣಿ ತಾಲೂಕಿನ ಕುನ್ನೂರು-ಬಾರವಾಡ, ಕಾರದಾಗ-ಬೋಜ್, ಕುನ್ನೂರು-ಭೋಜವಾಡಿ ಸೇರಿದಂತೆ ಒಟ್ಟು ನಾಲ್ಕು ಸೇತುವೆಗಳು ಜಲಾವೃತವಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.
ನದಿ ಪ್ರದೇಶಕ್ಕೆ ಯಾರೂ ಹೋಗಬಾರದೆಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.