Tue. Dec 24th, 2024

ನಾಲ್ವರು ಭಯೋತ್ಪಾದಕರನ್ನ ಹೊಡೆದುರುಳಿಸಿದ ಭಾರತೀಯ ಸೇನೆ

Share this with Friends

ಶ್ರೀನಗರ,ಜು.7: ಜಮ್ಮು- ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಹುತಾತ್ಮರಾದರೆ,ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಜಿಲ್ಲೆಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಿತು.

ಮೊಡೆರ್ಗಾಮ್ ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರು ಇದ್ದಾರೆಂಬ ಮಾಹಿತಿ ಆಧರಿಸಿ ಮನೆಯ ಮೇಲೆ ಸಿಆರ್‌ಪಿಎಫ್, ಸೇನೆ ಮತ್ತು ಸ್ಥಳೀಯ ಪೊಲೀಸ್ ಜಂಟಿ ಪಡೆಗಳು ದಾಳಿ ನಡೆಸಿದವು.ಈ ವೇಳೆ ಭಯೋತ್ಪಾದಕರ ಗುಂಡಿನ ದಾಳಿಯಿಂದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ

ಕುಲ್ಗಾಮ್‌ನ ಫ್ರಿಸಾಲ್ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಬಲಿಯಾಗಿದ್ದು ಸೇನಾ ಯೋಧೊಬ್ಬರು ಹುತಾತ್ಮರಾಗಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ.

ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಇನ್ನೂ ಇಬ್ಬರು ಉಗ್ರರು ಇದ್ದಾರೆಂದು ಅಧಿಕಾರಿಗಳು ಶಂಕಿಸಿದ್ದು ದಾಳಿ ಮುಂದುವರಿಯಲಿದೆ.


Share this with Friends

Related Post