ಬೆಂಗಳೂರು,ಜು.7: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ನಡುವೆ ಕುರ್ಚಿ ಜಗಳದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿವೆ ಎಂದು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಆರೋಪಿಸಿದರು.
ಶೇಷಾದ್ರಿಪುರಂನ ಗೋಲ್ಡನ್ ಮೆಟ್ರೋ ಹೋಟೆಲ್ ನಲ್ಲಿ ಕರ್ನಾಟಕ ಮೆಮೊರಿ ಚಾಂಪಿಯನ್‍ಶಿಪ್ ಕಾರ್ಯಕ್ರಮ ಉದ್ಘಾಟಿಸಿ ನಂತರ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ,ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲಾ, ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಟೀಕಿಸಿದರು.
ಆಸ್ಪತ್ರೆಗಳಲ್ಲಿ ಬಹಳ ಡಿಂಗ್ಯೂ ರೋಗಿಗಳು ದಾಖಲಾಗುತ್ತಿದ್ದು, ಸರಿಯಾಗಿ ಔಷಧಿ ಸಿಗುತ್ತಿಲ್ಲ,ಔಷಧಿಯ ಬಿಲ್ ಹೆಚ್ಚಿಸಿದ್ದಾರೆ, ಡೆಂಗ್ಯೂ ಪರೀಕ್ಷೆಗೆ ಸರಕಾರ ನಿಗದಿಪಡಿಸಿದ ಮೊತ್ತವನ್ನು ಯಾರೂ ಪಾಲಿಸುತ್ತಿಲ್ಲ ಎಂದು
ಶೋಭಾ ಕರಂದ್ಲಾಜೆ ಅಸಮಾಧಾನ ವ್ಯಕ್ತಪಡಿಸಿದರು.
ಝೀಕಾ ವೈರಸ್ ಕೂಡ ಕಾಡುಡುತ್ತಿದೆ, ಇದರ ಬಗ್ಗೆ ಮುಂದಿನ ಅಧಿವೇಶನದಲ್ಲಿ ಚರ್ಚೆ ನಡೆಸಲಿದ್ದೇವೆ ಎಂದು ಸಚಿವೆ ತಿಳಿಸಿದರು.