Mon. Apr 21st, 2025

ಸಚಿವ ಮಹದೇವಪ್ಪ, ಮುಡಾ ಅಧ್ಯಕ್ಷ ಮರೀಗೌಡ ವಿರುದ್ಧ ವಿಶ್ವನಾಥ್ ವಾಗ್ದಾಳಿ

Share this with Friends

ಮೈಸೂರು,ಜು.9: ಮುಡಾದಲ್ಲಿ ಎಲ್ಲಾ ಕಾನೂನುಬದ್ದವಾಗಿ ನಡೆದಿದ್ದರೆ ಸರ್ಕಾರ ತನಿಖೆಗೆ ಏಕೆ ವಹಿಸಬೇಕಿತ್ತು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಈ ವಿಚಾರದಲ್ಲಿ ಮುಡಾದವರು, ಸಚಿವರು ಬಾಯಿಗೆ ಬಂದಂತೆ ಮಾತನಾಡದಂತೆ ಸಿಎಂ ಸಿದ್ದರಾಮಯ್ಯ ಸೂಚಿಸಬೇಕು ಎಂದು ಒತ್ತಾಯಿಸಿದರು.

ಎಚ್ ವಿಶ್ವನಾಥ್ ಕೂಡ ಬದಲಿ ನಿವೇಶನ ಪಡೆದಿದ್ದಾರೆಂದು ಮುಡಾ ಅಧ್ಯಕ್ಷ ಕೆ ಮರೀಗೌಡ ನಿನ್ನೆಯಷ್ಟೇ ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದು ತಿರುಗೇಟು ನೀಡಿದ ವಿಶ್ವನಾಥ್,
ಎಲ್ಲಾ ಕಾನೂನು ಬದ್ದವಾಗಿ ನಡೆದಿದೆ ಎಂದಿರುವ ಸಚಿವ ಡಾ ಹೆಚ್ ಸಿ ಮಹದೇವಪ್ಪ ಹಾಗೂ ಮುಡಾ ಅಧ್ಯಕ್ಷ ಮರೀಗೌಡ ವಿರುದ್ಧ ವಾಗ್ದಾಳಿ ನಡೆಸಿದರು.

ಬದಲಿ ನಿವೇಶನ ಪಡೆದಿದ್ದೇನೆ ಎಂದು ನನ್ನ ವಿರುದ್ಧ ಆರೋಪಿಸಿದ್ದಾರೆ,
ಮುಡಾ ಅಕ್ರಮದಲ್ಲಿ ನನ್ನ ಪಾಲು ಇದೆ ಎಂದಿದ್ದಾರೆ,
ನನ್ನ ಪತ್ನಿಗೆ ದೇವನೂರು 3ನೇ ಹಂತದಲ್ಲಿ ನೀಡಿದ್ದ ನಿವೇಶನದ ಬಳಿ ವರುಣ ನಾಲೆ ಹಾದು ಹೋಗಿದೆ,ಆ ಸ್ಥಳ ಮನೆ ನಿರ್ಮಿಸಲು ಯೋಗ್ಯವಾಗಿರಲಿಲ್ಲ,ಹಾಗಾಗಿ ಬೇರೆಡೆ ನಿವೇಶನ ನೀಡಿದ್ದಾರೆ ಎಂದು ಸಮಜಾಯಿಷಿ ನೀಡಿದರು.

ನನ್ನ ವಿರುದ್ಧ ಆರೋಪ ಮಾಡಿರುವ ಮುಡಾ ಅಧ್ಯಕ್ಷ ಒಬ್ಬ ಮೂಢ,ಇನ್ನು
ಶಾಸಕ ಕೆ ಹರೀಶ್ ಗೌಡ ನೀಡಿರುವ ಹೇಳಿಕೆ ಸರಿಯಲ್ಲ,ಇವರೆಲ್ಲರೂ ಸೇರಿಕೊಂಡು ಹಗರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ವಿಶ್ವನಾಥ್ ಗಂಭೀರ ಆರೋಪ ಮಾಡಿದರು.

ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು,
ಇದೊಂದು ದೊಡ್ಡ ಕರ್ಮಕಾಂಡವಾಗಿದೆ ಎಂದು ಹೇಳಿದರು.

ಸಿಎ ಸೈಟ್ ಮತ್ತು ಪಾರ್ಕ್ ಗಳು ಮುಡಾದ ಆಸ್ತಿಗಳು,ಇವುಗಳನ್ನು ಕೂಡ ಕೆಲವರು ಮಾರಾಟ ಮಾಡಿದ್ದಾರೆ ಎಂದು ದೂರಿದರು.

ಎಂಎಲ್ಸಿ ಮಂಜೇಗೌಡ ತಾವು ನಿರ್ಮಿಸಿದ ಬಡಾವಣೆಯೊಂದರ ಪಾರ್ಕ್ ಜಾಗವನ್ನೇ ನಿವೇಶನವನ್ನಾಗಿ ಪರಿವರ್ತಿಸಿ ಮಾರಾಟ ಮಾಡಿದ್ದಾರೆ,ಹಾಗಾದರೆ ಅವರ ವಿರುದ್ಧ ಮುಡಾ ಅಧ್ಯಕ್ಷ ಕೆ ಮರೀಗೌಡ ಕ್ರಮ ಕೈಗೊಳ್ಳುತ್ತಾರಾ ಎಂದು ಎಚ್ ವಿಶ್ವನಾಥ್
ಸವಾಲು ಹಾಕಿದರು.


Share this with Friends

Related Post