Mon. Dec 23rd, 2024

ರಾಜ್ಯಸಭೆ ಚುನಾವಣೆ: 5ನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸ್ಪರ್ಧೆ- ಎಚ್ ಡಿ ಕೆ ಹೇಳಿಕೆ

Share this with Friends

ಬೆಂಗಳೂರು, ಫೆ.15: ರಾಜ್ಯಸಭೆ ಚುನಾವಣೆಗೆ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿಯವರನ್ನು ಕಣಕ್ಕಿಳಿಸಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ‌ ಮಾತನಾಡಿದ ಅವರು,ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಎಂದು ಹೇಳಿದರು.

ಬಿಜೆಪಿಯ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ಸಲಹೆ ಮೇರೆಗೆ ಎನ್​ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯಲ್ಲಿ ಹೆಚ್ಚುವರಿ ಮತಗಳಿವೆ, ವಿಪಕ್ಷದ ಮತಗಳು ನಷ್ಟವಾಗಬಾರದು, ಹೆಚ್ಚುವರಿ ವೋಟ್ ಕುಪೇಂದ್ರಗೆ ವರ್ಗಾವಣೆ ಮಾಡಬೇಕೆಂದು ತೀರ್ಮಾನಿಸಿದ್ದೇವೆ ಹಾಗಾಗಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.


Share this with Friends

Related Post