ನವದೆಹಲಿ,ಫೆ.15: ಚುನಾವಣಾ ಬಾಂಡ್ ಗಳು ಅಸಂವಿಧಾನಿಕವಾದದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಈ ಮೂಲಕ ಚುನಾವಣಾ ಬಾಂಡ್ ಗಳನ್ನ ಸುಪ್ರೀಂ ಕೋರ್ಟ್ ನಿಷೇಧಿಸಿದೆ.
ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಇಂದು ಈ ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ ಇದನ್ನು ಅಸಂವಿಧಾನಿಕ ಎಂದು ಕರೆದಿದೆ ಮತ್ತು ಬೇರೆ ಆಯ್ಕೆಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.
ಚುನಾವಣಾ ಬಾಂಡ್ ಯೋಜನೆಯನ್ನು ಟೀಕಿಸಿರುವ ಸುಪ್ರೀಂ ಕೋರ್ಟ್, ರಾಜಕೀಯ ಪಕ್ಷಗಳು ಪಡೆಯುತ್ತಿರುವ ಹಣದ ಬಗ್ಗೆ ಮಾಹಿತಿ ಪಡೆಯುವುದು ಬಹಳ ಮುಖ್ಯ, ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿವೆ ಎಂದೂ ಸ್ಪಷ್ಟಪಡಿಸಿದೆ.