Wed. Dec 25th, 2024

ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು!

Share this with Friends

ನವದೆಹಲಿ,ಜು.10: ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ ಕೊಡುಬೇಕಿರುವ ನಿರ್ದೇಶನವನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಆ ಅರ್ಜಿಯನ್ನು ವಜಾಗೊಳಿಸಿದೆ.

ಜೀವನಾಂಶವನ್ನು ಕೋರುವ ಕಾನೂನು ಎಲ್ಲಾ ವಿವಾಹಿತ ಮಹಿಳೆಯರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಪೀಠ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿ ನಾಗರತ್ನ ಮತ್ತು ನ್ಯಾಯಮೂರ್ತಿ ಮಾಸಿಹ್ ಅವರು ಪ್ರತ್ಯೇಕ, ಆದರೆ ಏಕಕಾಲೀನ ತೀರ್ಪುಗಳನ್ನು ನೀಡಿದ್ದಾರೆ


Share this with Friends

Related Post