Wed. Dec 25th, 2024

ವಾಲ್ಮೀಕಿ ನಿಗಮ ಹಗರಣ; ನಾಗೇಂದ್ರ, ದದ್ದಲ್ ಮನೆ ಮೇಲೆ ಇಡಿ ದಾಳಿ;ಪಿಎ ಅರೆಸ್ಟ್

Share this with Friends

ಬೆಂಗಳೂರು,ಜು.10: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಪ್ರಕರಣ ಸಂಬಂಧ ಮಾಜಿ ಸಚಿವ ನಾಗೇಂದ್ರ, ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ.

ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ.

ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರು, ಬಳ್ಳಾರಿಯಲ್ಲಿರುವ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ.

ಬೆಂಗಳೂರಿನ ಪದ್ಮನಾಭ್ ನಿವಾಸ, ಹೈದರಾಬಾದ್‌ನಲ್ಲಿರುವ ಸತ್ಯನಾರಾಯಣ್ ವರ್ಮಾ ನಿವಾಸ ಕಚೇರಿ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ನಾಗೇಂದ್ರ ಆಪ್ತ ಸಹಾಯಕ ಹರೀಶ್‌ ಎಂಬಾತನನ್ನು ಬಂಧಿಸಿ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದು‌ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.


Share this with Friends

Related Post