Thu. Dec 26th, 2024

ಕರ್ನಾಟಕ ಸೇವಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

Share this with Friends

ಮೈಸೂರು,ಜು10: ಶ್ರೀ ದುರ್ಗಾ ಫೌಂಡೇಶನ್ 2023- 24ನೇ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರಿಗೆ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ನೀಡುತ್ತಿದ್ದು ಅರ್ಜಿ ಆಹ್ವಾನಿಸಿದೆ.

ಶ್ರೀ ದುರ್ಗಾ ಫೌಂಡೇಶನ್ ನ ಐದನೇ ವಾರ್ಷಿಕೋತ್ಸವದ ಪ್ರಯುಕ್ತ ಸಾಧಕರಿಗೆ‌ ಈ ಪ್ರಶಸ್ತಿ ಪ್ರದಾನ ಮಾಡುತ್ತಿದೆ ಎಂದು ಅಧ್ಯಕ್ಷೆ ರೇಖಾ ಶ್ರೀನಿವಾಸ್ ತಿಳಿಸಿದ್ದಾರೆ.

ಶಿಕ್ಷಣ, ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ, ಸಾಂಸ್ಕೃತಿಕ, ಬಹುಮುಖ ಪ್ರತಿಭೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು, ಅರ್ಹರು ಪ್ರಶಸ್ತಿಗೆ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳು ಹಾಗೂ
ಸ್ವವಿವರದೊಂದಿಗೆ ಜುಲೈ 25 ರೊಳಗೆ 8971389539 ವಾಟ್ಸಪ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಜುಲೈ 29ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಕರ್ನಾಟಕ ಸೇವಾ ರತ್ನ ಪ್ರಶಸ್ತಿ-2024 ನೀಡಿ ಗೌರವಿಸಲಾಗುವುದು ಎಂದು ರೇಖಾ ಶ್ರೀನಿವಾಸ್ ತಿಳಿಸಿದ್ದಾರೆ.


Share this with Friends

Related Post