Fri. Dec 27th, 2024

ವಾಲ್ಮೀಕಿ ಅಭಿವೃದ್ಧಿ ನಿಗಮದಹಗರಣ:ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

Share this with Friends

ಬೆಂಗಳೂರು,ಜು.12: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಿನ್ನೆಲೆಯಲ್ಲಿ ಮಾಜಿ ಸಚಿವ‌ ನಾಗೇಂದ್ರ ಅವರನ್ನು ಇಡಿ‌ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣ ಸಂಬಂಧ ವಿಚಾರಣೆಗಾಗಿ ನಾಗೇಂದ್ರ ಅವರನ್ನು ಇಂದು ಬೆಳಗ್ಗೆ ಅಧಿಕಾರಿಗಳು ವಶಕ್ಕೆ ಪಡೆದರು.

ಇಡಿ ಕಚೇರಿಗೆ ಕರೆದೊಯ್ಯುವ ವೇಳೆ ನಾಗೇಂದ್ರ ಅವರು ಮಾಧ್ಯಮಗಳ ಕಡೆ ಮುಖ ಮಾಡಿ ನನಗೇನೂ ಗೊತ್ತಿಲ್ಲ ಎಂದು ಹೇಳಿ ತೆರಳಿದರು.

ಹಗರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳವರೆಗೆ ಜಾರಿ ನಿರ್ದೇಶನಾಲಯ ಶೋಧ ನಡೆಸಿತು. ಅಧಿಕಾರಿಗಳು,ಶಾಸಕ ಬಸನಗೌಡ ದದ್ದಲ್‌ ಅವರ ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿ ಕೊಂಡಿದ್ದರು.

ಈ ವೇಳೆ ನಾಗೇಂದ್ರ ಆಪ್ತ ಸಹಾಯಕ ಹರೀಶ್‌ ಅವರನ್ನು ಇಡಿ ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಳುಹಿಸಿತ್ತು.ಇದೀಗ ನಾಗೇಂದ್ರ ವಿಚಾರಣೆ ನಡೆದಿದೆ.


Share this with Friends

Related Post