Fri. Apr 18th, 2025

ವಕ್ಫ್‌ ಬೋರ್ಡ್‌ನಲ್ಲೂ ಕೋಟ್ಯಂತರ ರೂ. ಹಣ ಅಕ್ರಮ ವರ್ಗಾವಣೆ

Share this with Friends

ಬೆಂಗಳೂರು,ಜು.14: ವಾಲ್ಮೀಕಿ ನಿಗಮ ಆಯ್ತು ಈಗ ವಕ್ಫ್‌ ಬೋರ್ಡ್‌ನಲ್ಲೂ ಕೋಟ್ಯಂತರ ರೂ. ಹಣ ಅಕ್ರಮ ವರ್ಗಾವಣೆ ಮಾಡಲಾಗಿದೆ.

ವಕ್ಫ್‌ ಬೋರ್ಡ್‌ ಮಾಜಿ ಸಿಇಒ ಝುಲ್ಫಿಕಾರುಲ್ಲಾ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹಮದ್ ಅಬ್ಬಾಸ್ ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿದೆ.

ವಕ್ಫ್ ಮಂಡಳಿ ಆಸ್ತಿ ಮಾರಾಟ ಸಂಬಂಧ 4 ಕೋಟಿ ರೂ. ಹಣ ಮಂಡಳಿ ಬ್ಯಾಂಕ್ ಖಾತೆಗೆ ಜಮೆಯಾಗಿತ್ತು. ಈ ಹಣವನ್ನು 2016ರಲ್ಲಿ ಚಿಂತಾಮಣಿಯ ವಿಜಯ ಬ್ಯಾಂಕ್‌ಗೆ ವರ್ಗಾವಣೆ ಮಾಡಿದ್ದ ಝುಲ್ಫಿಕಾರುಲ್ಲಾ ಸಿಇಒ ಹೆಸರಿನಲ್ಲಿ ಎರಡು ಚೆಕ್ ಮೂಲಕ ಫಿಕ್ಸೆಡ್ ಡೆಪಾಸಿಟ್ ಮಾಡಿದ್ದರು ಇದರಿಂದ ವಕ್ಫ್ ಮಂಡಳಿಗೆ 8 ಕೋಟಿ ರೂ.ನಷ್ಟ ಆಗಿದೆ ಎಂದು ದೂರು ನೀಡಲಾಗಿದೆ.

ಸಂಸ್ಥೆಯ ಗಮನಕ್ಕೆ ತರದೇ ಹಣ ವರ್ಗಾವಣೆ ಮಾಡಿ ನಂಬಿಕೆ ದ್ರೋಹ ಎಸಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.


Share this with Friends

Related Post