Wed. Dec 25th, 2024

ಜಮ್ಮು, ಕಾಶ್ಮೀರದಲ್ಲಿ ಗುಂಡಿನ ಚಕಮಕಿ:ಅಧಿಕಾರಿ ಸೇರಿ ನಾಲ್ವರು ಹುತಾತ್ಮ

Share this with Friends

ಶ್ರೀನಗರ,ಜು.16: ಜಮ್ಮು, ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು – ಭಾರತೀಯ ಸೇನಾಪಡೆ ನಡುವೆ ಗುಂಡಿನ ಚಕಮಕಿ ನಡೆದು ಸೇನಾಧಿಕಾರಿ ಸೇರಿ 4 ಯೋಧರು ಹುತಾತ್ಮರಾಗಿದ್ದಾರೆ

ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗ್ರೂಪ್ ಸಿಬ್ಬಂದಿ ದೇಸಾ ಅರಣ್ಯ ಪ್ರದೇಶದ ಧರಿ ಗೋಟೆ ಉರರಬಾಗಿಯಲ್ಲಿ ನಿನ್ನೆ ರಾತ್ರಿ 7.45 ರ ಸುಮಾರಿಗೆ ಶೋಧ ಕಾರ್ಯ ಪ್ರಾರಂಭಿಸಿದಾಗ ಎನ್‌ಕೌಂಟರ್ ಪ್ರಾರಂಭವಾಗಿದೆ.

ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಅಧಿಕಾರಿ ಹಾಗೂ ಮೂವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದು,ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ.

ಎನ್ಕೌಂಟರ್ ನಡೆಯುತ್ತಿರುವ ಪ್ರದೇಶಕ್ಕೆ ಹೆಚ್ಚುವರಿ ಯೋಧರನ್ನು ರವಾನಿಸಲಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿಯ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಭಯೋತ್ಪಾದಕರ ಅಡಗುತಾಣದಿಂದ
30 ಸುತ್ತುಗಳ ಎಕೆ-47, ಎಕೆ-47 ರೈಫಲ್‌ನ ಒಂದು ಮ್ಯಾಗಜೀನ್ ಮತ್ತು ಒಂದು ಎಚ್‌ಇ-36 ಹ್ಯಾಂಡ್ ಗ್ರೆನೇಡ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Share this with Friends

Related Post