Sat. Nov 2nd, 2024

ನಂಜನಗೂಡು ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

Share this with Friends

ಮೈಸೂರು, ಜು.17: ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಳವಾದ ಕಾರಣ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟ ಮತ್ತು ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಹಳ್ಳಿಕೇರಿ, ಹದಿನಾರು ಕಾಲು ಮಂಟಪ, ಸ್ನಾನಘಟ್ಟ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು

ನಂಜನಗೂಡು ತಾಲ್ಲೂಕಿನ ಕಡಜಟ್ಟಿ ಗ್ರಾಮ, ಹುಲ್ಲಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು, ಹುಲ್ಲಹಳ್ಳಿ ಮೈಸೂರು ಸೇತುವೆ, ಬೊಕ್ಕ ಹಳ್ಳಿ, ಕುಳ್ಳಂಕಯ್ಯನ ಹುಂಡಿ, ಕಪಿಲಾ ನದಿ ಸ್ನಾನಘಟ್ಟಗಳಿಗೆ ತೆರಳಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಈ ವೇಳೆ ನಗರದ ಹಳ್ಳದಕೇರಿ ಬಡಾವಣೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು,ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ತಹಶೀಲ್ದಾರ್ ಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ನಗರಸಭಾ ಆಯುಕ್ತ ನಂಜುಂಡಸ್ವಾಮಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.


Share this with Friends

Related Post