Fri. Nov 1st, 2024

ವರ್ಗಾವಣೆಗೆ ರೇಟ್‌ ಕಾರ್ಡ್‌ ಫಿಕ್ಸ್‌ ಆರೋಪ: ಬಿಜೆಪಿ-ಜೆಡಿಎಸ್‌ ಪ್ರತಿಭಟನೆ

Share this with Friends

ಬೆಂಗಳೂರು,ಜು.19: ರಾಜ್ಯ ಸರ್ಕಾರ ವರ್ಗಾವಣೆಗೆ ರೇಟ್ ಕಾರ್ಡ್ ಫಿಕ್ಸ್ ಮಾಡಿದೆ ಎಂದು ಆರೋಪಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪರಿಷತ್‌ನ ಬಿಜೆಪಿ, ಜೆಡಿಎಸ್ ಸದಸ್ಯರು ಧರಣಿ ನಡೆಸಿದರು.

ಈ ವೇಳೆ ಯಾವ ಇಲಾಖೆಯಲ್ಲಿ ಯಾವೆಲ್ಲ ಹುದ್ದೆಗಳಿಗೆ ಎಷ್ಟೆಷ್ಟು ರೇಟ್ ಕಾರ್ಡ್ ಫಿಕ್ಸ್ ಮಾಡಲಾಗಿದೆ ಎಂಬ ಪೋಸ್ಟರ್‌ಗಳನ್ನ ಪ್ರದರ್ಶಿಸಿ ಸರ್ಕಾರದ ವಿರುದ್ಧ ಪರಿಷತ್ ಸದಸ್ಯರು ಧಿಕ್ಕಾರ ಕೂಗಿದರು.

ಈ ವೇಳೆ ಸಿ.ಟಿ.ರವಿ ಮಾತನಾಡಿ, ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ಎಲ್ಲೆ ಮೀರಿದೆ,ಸಿದ್ದರಾಮಯ್ಯ ಅವರದ್ದು ಪಾರದರ್ಶಕ ಭ್ರಷ್ಟ ಸರ್ಕಾರ, ಇಲಾಖೆಗಳಲ್ಲಿ ವರ್ಗಾವಣೆಗೆ ರೇಟ್ ಕಾರ್ಡ್ ಫಿಕ್ಸ್ ಮಾಡಲಾಗಿದೆ ಎಂದು ದೂರಿದರು.

ನಲವತ್ತು ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ, ಇದನ್ನ ಯಾರೂ ಒಪ್ಪಲಾರರು ಎಂದು ಹೇಳಿದರು.

ನಗರಾಭಿವೃದ್ಧಿ ಇಲಾಖೆಯಲ್ಲಿ ಚದರಡಿಗೆ 100 ರೂ. ಕೊಡಬೇಕು. ಭೂ ಪರಿವರ್ತನೆಗೆ ಎಕರೆಗೆ 27 ಲಕ್ಷ ರೂ. ಫಿಕ್ಸ್, ಪೊಲೀಸ್ ಇನ್‌ಸ್ಪೆಕ್ಟರ್ ವರ್ಗಾವಣೆಗೆ 50 ಲಕ್ಷದಿಂದ 1 ಕೋಟಿ ರೂ., ಎಇ 50 ಲಕ್ಷದಿಂದ 75 ಲಕ್ಷ. ತಹಶಿಲ್ದಾರ್ 50 ಲಕ್ಷದಿಂದ 1 ಕೋಟಿ ರೂ. ಬೆಂಗಳೂರು ಎಸಿ 5 ಕೋಟಿ ರೂ. ಎಸಿಪಿ 1.5 ಕೋಟಿಯಿಂದ 2 ಕೋಟಿ. ಎಇ 20-25 ಲಕ್ಷ ಎಂದು ಫಿಕ್ಸ್ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದರು ಸಿ.ಟಿ.ರವಿ.


Share this with Friends

Related Post