Sat. Apr 19th, 2025

ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Share this with Friends

ಚಿಕ್ಕಮಗಳೂರು,ಜು.21: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಕರಾವಳಿ, ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ, ಭೂಕುಸಿತ ಸಂಭವಿಸಿದ್ದು,ಜನರು ಹೈರಾಣಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಹಲವೆಡೆ ಗುಡ್ಡ ಕುಸಿತ ವಾಗಿದೆ.

ದತ್ತಪೀಠಕ್ಕೆ ತೆರಳುವ ಮಾರ್ಗ ಕವಿಕಲ್ ಗಂಡಿ ಬಳಿ ಗುಡ್ದ ಕುಸಿದಿರುವ ಹಿನ್ನೆಲೆಯಲ್ಲಿ ದತ್ತಪೀಠಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಹಲವು ದಿನಗಳಿಂದ ಗುಡ್ಡ ಕುಸಿತವಾಗುತ್ತಿದೆ, ಕವಿಕಲ್ ಗಂಡಿ ಬಳಿ ರಸ್ತೆ ಮೇಲೆ ಗುಡ್ಡ ಕುಸಿದು ಮಣ್ಣು, ಮರಗಳು ರಸ್ತೆಯ ಮೇಲೆ ಬಿದ್ದಿವೆ,ಹಾಗಾಗಿ ಮುಂಜಾಗೃತಾ ಕ್ರಮವಾಗಿ ದತ್ತಪೀಠಕ್ಕೆ ಪ್ರವಾಸಿಗರು ಸಧ್ಯಕ್ಕೆ ಬರಬಾರದೆಂದು ಜಿಲ್ಲಾಡಳಿತ ಮನವಿ ಮಾಡಿದೆ.


Share this with Friends

Related Post