Mon. Dec 23rd, 2024

ಕೆಆರ್‌ಎಸ್ ಭರ್ತಿ:ಹರ್ಷ ವ್ಯಕ್ತಪಡಿಸಿದ ಡಿ.ಕೆ.ಶಿವಕುಮಾರ್

Share this with Friends

ಮಂಡ್ಯ,ಜು.22: ಕಳೆದ ಒಂದು ವಾರದಿಂದ ಸತತ ಮಳೆ ಸುರಿದು ಕೆಆರ್‌ಎಸ್‌ ಭರ್ತಿಯಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿ ವೀಕ್ಷಿಸಿ ಹರ್ಷ ಪಟ್ಟರು

ಕೆಆರ್‌ಎಸ್ ಡ್ಯಾಂ ವೀಕ್ಷಣೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ವರುಣನ ಕೃಪೆ, ತಾಯಿ ಚಾಮುಂಡೇಶ್ವರಿ ಅನುಗ್ರಹ ಕಾವೇರಿ ನದಿಗೆ ನಾವೆಲ್ಲ ಬಾಗಿನ ಅರ್ಪಣೆ ಮಾಡುವ ಸೌಭಾಗ್ಯ ಸಿಕ್ಕಿದೆ ಎಂದು ಸಂತಸ‌ ವ್ಯಕ್ತಪಡಿಸಿದರು.

ಕಳೆದ ವರ್ಷ ನಾವು ಕಷ್ಟದಲ್ಲಿದ್ದೆವು. ಆದರೂ ಶಕ್ತಿ ಮೀರಿ ರೈತರನ್ನ ಕಾಪಾಡುವ ಕೆಲಸ ಮಾಡಿದ್ದೇವೆ. ಸಾಕಷ್ಟು ಬರಗಾಲ ಇತ್ತು,ಈಗ ಕಾವೇರಿ ತಾಯಿಯ ಕೃಪೆ ನಮಗೆ ಸಿಕ್ಕಿದೆ ಎಂದು ಹರ್ಷಪಟ್ಟರು.

40 ಟಿಎಂಸಿ ನೀರು ತಮಿಳುನಾಡಿಗೆ ಬಿಡಬೇಕಿತ್ತು,ಸದ್ಯಕ್ಕೆ 20 ಟಿಎಂಸಿ ಬಿಡಿ ಎಂದು ಆದೇಶ ಆಗಿತ್ತು. ಆದರೆ ನಾವು ನಿರ್ಧಾರ ಮಾಡಿ ನೀರು ಬಿಡಲಿಲ್ಲ. ಕೆಲವರು ನೀರು ಬಿಟ್ಟರು ಅಂತಾ ಹೇಳಿದರು,ಆದರೆ ನಾವು ನೀರು ಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ 30 ಟಿಎಂಸಿ ನೀರು ಹರಿದು ಹೋಗಿದೆ. ಇನ್ನು 10 ಟಿಎಂಸಿ ನೀರು ಹರಿದರೆ ಈ ವರ್ಷದ ಗಡುವು ತೀರಲಿದೆ ಎಂದು ಡಿಕೆಶಿ ಸಮಾಧಾನಪಟ್ಟರು.

ಸದ್ಯ ಡ್ಯಾಂನಿಂದ 50 ಸಾವಿರ ಕ್ಯುಸೆಕ್ ನೀರು ಹೊರಹೋಗುತ್ತಿದೆ ವರುಣನ ಕೃಪೆಯಿಂದ ಆದೇಶ ಪಾಲನೆ ಮಾಡಿದಂತಾಗಿದೆ,1,455 ಕೆರೆಗಳು ಕಾವೇರಿ ಕೊಳ್ಳದಲ್ಲಿವೆ. ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.


Share this with Friends

Related Post