Fri. Nov 1st, 2024

ಉದ್ಯೋಗ ಸಂಬಂಧ ಮೂರು ಯೋಜನೆ:ನಿರ್ಮಲಾ ಸೀತಾರಾಮನ್

Share this with Friends

ನವದೆಹಲಿ,ಜು.23: ಉದ್ಯೋಗ ಸಂಬಂಧ ಮೂರು ಯೋಜನೆಗಳನ್ನು ಪ್ರಾರಂಭಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.

2024-25 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿ,
ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ 30 ಲಕ್ಷ ಯುವಜನತೆಗೆ ಒಂದು ತಿಂಗಳ ಭವಿಷ್ಯ ನಿಧಿ ಕೊಡುಗೆಯನ್ನು ನೀಡುವ ಮೂಲಕ ನಮ್ಮ ಸರ್ಕಾರ ಪ್ರೋತ್ಸಾಹ ನೀಡುತ್ತದೆ ಎಂದು ಹೇಳಿದರು.

ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ದೇಶದಲ್ಲಿ ಉದ್ಯೋಗಿ ಮಹಿಳಾ ಹಾಸ್ಟೆಲ್‌ಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಹವಾಮಾನಕ್ಕೆ ತಕ್ಕಂತೆ ಬೀಜಗಳನ್ನು ಅಭಿವೃದ್ಧಿಪಡಿಸಲು ಸರ್ಕಾರವು ಖಾಸಗಿ ವಲಯ ಕ್ಷೇತ್ರದ ತಜ್ಞರು ಮತ್ತು ಇತರರಿಗೆ ಹಣ ಒದಗಿಸಲಿದೆ ಎಂದು ಹೇಳಿದ್ದಾರೆ.

ಈಗಾಗಲೇ ಅಸ್ತಿತ್ವದಲ್ಲಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ವಯಸ್ಕ ಸದಸ್ಯರು ಕೆಲಸವನ್ನು ಬಯಸುವ ಪ್ರತಿ ಮನೆಯ ಕನಿಷ್ಠ ಒಬ್ಬ ಸದಸ್ಯರಿಗೆ ನಿರ್ದಿಷ್ಟ ಹಣಕಾಸಿನ ವರ್ಷದಲ್ಲಿ 100 ದಿನಗಳ ಕೂಲಿ ಉದ್ಯೋಗವನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.


Share this with Friends

Related Post