Mon. Dec 23rd, 2024

ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಮುಖ್ಯಾಂಶಗಳು

Share this with Friends

ಬೆಂಗಳೂರು, ಫೆ.16: ಮುಖ್ಯ ಮಂತ್ರಿ ಸಿದ್ದರಾಮಯ್ಯ ‌ಅವರು ಇಂದು ಮಂಡಿಸಿದ ಬಜೆಟ್ ಮುಖ್ಯಾಂಶಗಳು ಹೀಗಿದೆ.

ತಿರುಮಲ, ಶ್ರೀಶೈಲ, ವಾರಣಾಸಿಯಲ್ಲಿ ವಸತಿ ನಿಲಯ
ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ
ಮಹಿಳೆಯರ ಸ್ವಾವಲಂಬನೆಗಾಗಿ ಗ್ರಾಮೀಣ ಭಾಗಗಳಲ್ಲಿ ಕೆಫೆಸಂಜೀವಿನಿ
ರಾಜ್ಯದಲ್ಲಿ ಜಲಸಾರಿಗೆ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಖಾಸಗಿ ಹೂಡಿಕೆ
ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ
ಬೆಂಗಳೂರಿನಲ್ಲಿ ಸುರಂಗ ಮಾರ್ಗಕ್ಕೆ ಅಸ್ತು
ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯುವುದು
ಸಿರಿಧಾನ್ಯ ಉತ್ಪನ್ನ ಪ್ರೋತ್ಸಾಹಕ್ಕೆ ‘ನಮ್ಮ ಮಿಲ್ಲೆಟ್’ ಕಾರ್ಯಕ್ರಮ
ಕನ್ನಡ ಕಸ್ತೂರಿ ಎಂಬ ಯಂತ್ರಾನುವಾದ ತಂತ್ರಾಂಶದ ಅಭಿವೃದ್ಧಿಗೆ ಕ್ರಮ
ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಕ್ರಮ
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್
2024-25 ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ
ಮಂಗಳೂರಿನ ಹಜ್ ಭವನದ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ
ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಕ್ರೀಡಾಪಟುಗೆ 6 ಕೋಟಿ
ಕಲಬುರಗಿಯಲ್ಲಿ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ
ನಮ್ಮ ಮೆಟ್ರೋ ಹಂತ 3 ಕ್ಕೆ 15611 ಕೋಟಿಗೆ ಅನುಮೋದನೆ
ಬೆಂಗಳೂರು-ಮಂಡ್ಯ-ಮೈಸೂರು ವಾಹನ ಸಂಚಾರ ದಟ್ಟಣೆ ತಡೆಗಟ್ಟಲು ಫ್ಲೈ ಓವರ್ ನಿರ್ಮಾಣ
5 ಸಾವಿರ ಎಸ್ ಟಿ ಯುವಕ-ಯುವತಿಯರಿಗೆ ಡ್ರೋನ್ ತರಬೇತಿ
ವಿವಿ ಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ವಿದ್ಯಾರ್ಥಿಗಳಿಗೆ 25 ಸಾವಿರ ರೂ‌ ಶಿಷ್ಯ ವೇತನ.
ಪ್ರವಾದೋದ್ಯಮ ಉತ್ತೇಜನಕ್ಕಾಗಿ 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ಯೋಜನೆ ಅಥವಾ ರೋಫ್ ವೇ ನಿರ್ಮಾಣ.
ದೇವದಾಸಿಯರ ಮಾಸಾಶನ 2 ಸಾವಿರ ರೂ.ಗೆ ಹೆಚ್ಚಳ
ಭಾನುವಾರವೂ ಉಪನೋಂದಣಾಧಿಕಾರಿ ಕಚೇರಿ ಓಪನ್
ಅಂಗನವಾಡಿ ಸಹಾಯಕಿಯರಿಗೆ ಗ್ರಾಚ್ಯುಟಿ ನೀಡಲು ನಿರ್ಧಾರ
ಸೋಲರ್ ಪಂಪ್ಸೆಂಟ್ ಹಾಕುವ ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ಸಹಾಯಧನ 30% ರಿಂದ 50% ಗೆ ಹೆಚ್ಚಳ
ಮಂಡ್ಯ ಮೈಸೂರು ಶುಗರ್ ಕಾರ್ಖಾನೆ ಜಾಗದಲ್ಲಿ ಹೊಸ ಸಕ್ಕರೆ ಕಾರ್ಖಾನೆಗೆ ನಿರ್ಧಾರ
ರೈತ ಮಹಿಳೆಯರಿಗೆ ಹೈನುಗಾರಿಕೆಗೆ ಪ್ರೋತ್ಸಾಹ
ವಿವಿಧ ಬರ ಪರಿಹಾರ ಕ್ರಮಕ್ಕೆ ಬಜೆಟ್ ನಲ್ಲಿ 500 ಕೋಟಿ ಘೋಷಣೆ
ರೈತರನ್ನ ಸ್ವಾವಲಂಬಿ ಮಾಡಲು 1174 ಕೋಟಿ ವೆಚ್ಚದಲ್ಲಿ 40 ಸಾವಿರ ಜಾಲಮುಕ್ತ ಸೋಲರ್ ಪಂಪ್ ಸೆಟ್ ಯೋಜನೆ
ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50 ಕೋಟಿ.
ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ 200 ಕೋಟಿ.
ಬೌದ್ದರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನ ಪಾಲಿ ಭಾಷೆಯಿಂದ ಕನ್ನಡ ಭಾಷೆಗೆ ಅನುವಾದ.
ಸಿಖ್ಖ್ ಲಿಗಾರ್ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ 2 ಕೋಟಿ.
ಬೀದರ್ನಲ್ಲಿರೋ ಶ್ರೀ ನಾನನ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗೆ 1 ಕೋಟಿ
7ನೇ ವೇತನ ಆಯೋಗ ಜಾರಿ ಮುನ್ಸೂಚನೆ
ಅನ್ನ ಸುವಿಧಾ’ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲವರಿ ಆಪ್. 80 ವರ್ಷ ದಾಟಿದ ಹಿರಿಯ ನಾಗರಿಕರು ಇರುವ ಮನೆಗೆ ಈ ಯೋಜನೆ
ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IMl ಬಿಯರ್ ಸ್ಲಾಬ್ ಪರಿಷ್ಕರಣೆ
ಮೀನುಗಾರಿಕೆ ಕ್ಷೇತ್ರಕ್ಕೆ 3 ಸಾವಿರ ಕೋಟಿ ರೂ. ಯೋಜನೆ.
ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್


Share this with Friends

Related Post