ಬೆಂಗಳೂರು, ಜು.26: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಇಂದು ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಕೆ.ಪಾಟೀಲ್, ಶಾಲಿನಿ ರಜನೀಶ್ ಅವರನ್ನು ನೂತನ ಸಿಎಸ್ ಆಗಿ ನೇಮಕ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಹೇಳಿದರು.
ಸರ್ಕಾರದ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು 5 ದಿನಗಳಲ್ಲಿ ನಿವೃತ್ತಿಯಾಗಲಿದ್ದಾರೆ,ಹಾಗಾಗಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ಒಮ್ಮತದ ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.