ಬೆಂಗಳೂರು,ಫೆ.16: ಬೆಂಗಳೂರಿನ ಒತ್ತಡ ತಗ್ಗಿಸಲು ರಾಜ್ಯದ ಇತರೆ 10 ನಗರಗಳನ್ನು ಅಭಿವೃದ್ಧಿಪಡಿಸಲು ವಿವಿಧ ಯೋಜನೆ ರೂಪಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಬಜೆಟ್ ಭಾಷಣದಲ್ಲಿ ಈ ವಿಷಯ ತಿಳಿಸಿದ ಅವರು,10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ಎರಡು ಸಾವಿರ ಕೋಟಿ ರೂ. ಒದಗಿಸಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ.
ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆಜಿಎಫ್, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳಲ್ಲಿ ಇಂಟಿಗ್ರೇಟೆಡ್ ಟೌನ್‍ಶಿಪ್‍ಗಳನ್ನು ಅಭಿವೃದ್ಧಿಪಡಿಸಲಾಗುವುದು
ಎಂದು ತಿಳಿಸಿದರು.
ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‍ಶಿಪ್‍ಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.