ಮೈಸೂರು, ಜು.29: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರೂ ಕೂಡಾ ಮುಡಾ ನಿವೇಶನ ತೆಗೆದುಕೊಂಡಿದ್ದಾರೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ,ದೇವೇಗೌಡರಿಗೆ ಎಷ್ಟು ಸೈಟ್
ಹೋಗಿದೆ ಗೊತ್ತಾ,ಪುಟ್ಟಯ್ಯ ಸಿಐಟಿಬಿ ಅಧ್ಯಕ್ಷರಾಗಿದ್ದಾಗ ದೇವೇಗೌಡರ ಕುಟುಂಬಕ್ಕೆ ಎಷ್ಟು ಸೈಟ್ ಬರೆಸಿಕೊಂಡಿದ್ದಾರೇ ಪಟ್ಟಿ ಕೊಡಲೆ ಎಂದು ಹೊಸ ವಿಷಯ ಹೇಳಿ ಎಲ್ಲರನ್ನ ಚಿಕಿತಗೊಳಿಸಿದರು.
ಕುಮಾರಸ್ವಾಮಿ 40 ವರ್ಷದ ಹಿಂದೆ ಮುಡಾ ಸೈಟ್ ಪಡೆದಿದ್ದಾರೆ ಅದರ ಸ್ವಾಧೀನ ಪತ್ರವನ್ನು ಪಡೆದುಕೊಂಡಿದ್ದಾರೆ,ಈಗ ಇಲ್ಲ ಎಂದು ಸುಳ್ಳು ಹೇಳಿದರೇ ಹೇಗೆ ಎಂದು ಪ್ರಶ್ನಿಸಿದರು.
ಭದ್ರಾ ಯೋಜನೆ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರಾ ಆಂಧ್ರ,ಬಿಹಾರಕ್ಕೆ ವಿಶೇಷ ಅನುದಾನ ಘೋಷಣೆ ಮಾಡಿದ್ದಾರೆ, ರಾಜ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಇದೇ ವೇಳೆ ಸಿದ್ದರಾಮಯ್ಯ ಪ್ರಶ್ನಿಸಿದರು.
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಿಲ್ಲ ಎಂದು ಸಮರ್ಥನೆ ಮಾಡಿಕೊಂಡ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸಿಎಂ ಸಿದ್ದರಾಮಯ್ಯ ಈ ರೀತಿ ತಿರುಗೇಟು ನೀಡಿದರು.
ಹೋಗಲಿ ಹೆಚ್.ಡಿ ಕುಮಾರಸ್ವಾಮಿ ಕ್ಷೇತ್ರ ಮಂಡ್ಯಕ್ಕೆ ಕೈಗಾರಿಕೆ ಏನಾದರೂ ಬಂತಾ, ಮೈಸೂರು ಅಥವಾ ಹಾಸನಕ್ಕೆ ಐಐಟಿ ಕೇಳಿದ್ದೆವು ಕೊಟ್ಟಿದಾರಾ ನಿರ್ಮಲಾ ಸೀತಾರಾಮನ್ ರಾಜ್ಯದಿಂದಲೇ ಆಯ್ಕೆಯಾದವರು,ಆದರೂ ಸುಳ್ಳು ಹೇಳುತ್ತಿದ್ದಾರೆ ಎಂದು ಬೇಸರ ಪಟ್ಟರು.
ಮುಡಾ, ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಬಿಜೆಪಿ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿ ಅವಧಿಯಲ್ಲಿ ಹಗರಣಗಳು ನಡೆದಿಲ್ವಾ ಅವರ ಅವಧಿಯ 21 ಹಗರಣಗಳನ್ನ ಹೇಳಿದ್ದೇನೆ ಅವರು ಅಧಿಕಾರದಲ್ಲಿದ್ದಾಗ ಒಂದು ಕೇಸನ್ನಾದರೂ ಸಿಬಿಐಗೆ ಕೊಟ್ಟಿದ್ದರಾ ಎಂದು ಸಿದ್ದು ಕಾರವಾಗಿ ಪ್ರಶ್ನಿಸಿದರು.
ಮೇಕೆದಾಟು ಅಣೆ ಕಟ್ಟು ಕಟ್ಟಲು ನಾವು ಸಿದ್ದರಿದ್ದೇವೆ,ಆದರೆ ತಮಿಳುನಾಡಿನವರು ರಾಜಕೀಯ ಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲಿ ಎಂದು ಸಿಎಂ ಆಗ್ರಹಿಸಿದರು.
ಬಿಜೆಪಿ ಬ್ಲ್ಯಾಕ್ ಮೇಲ್ ತಂತ್ರ ಮಾಡುತ್ತಿದೆ,
ಇಲ್ಲದ ಹಗರಣವನ್ನ ಸೃಷ್ಟಿ ಮಾಡುತ್ತಿದೆ,
ಅವರಿಗೆ ಯಾವ ಐಡಿಯಾಲಾಜಿಯೂ ಇಲ್ಲ, ಯಾವತ್ತು ಅವರು ನ್ಯಾಯಪರವಾಗಿಲ್ಲ ಎಂದು ಕಿಡಿಕಾರಿದರು.
ಮುಡಾ ಹಗರಣವನ್ನ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ,ನ್ಯಾಯಾಂಗ ತನಿಖೆಯನ್ನ ಕೇಂದ್ರ ಸಚಿವರು ಅನುಮಾನದಿಂದ ನೋಡಿದರೇ ಅದರಲ್ಲಿ ಅರ್ಥ ಇದ್ಯಾ
ಅವರ ಅವಧಿಯಲ್ಲಿ ನಡೆದ ಒಂದು ಪ್ರಕರಣವನ್ನಾದರೂ ನ್ಯಾಯಾಂಗ ತನಿಖೆ ಮಾಡಿಸಿದ್ದಾರಾ ಎಂದು ಸಿದ್ದರಾಮಯ್ಯ ಕಾರವಾಗಿ ಪ್ರಶ್ನಿಸಿದರು.