ಮಂಡ್ಯ,ಜು.31: ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೃಷ್ಣರಾಜಸಾಗರ ಜಲಾಶಯಕ್ಕೆ ಭಾರಿ
ಪ್ರಮಾಣದಲ್ಲಿ ನೀರು ಬರುತ್ತಿರುವುದರಿಂದ
ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕೆಂದು ಕೃರಾಸಾ ಆಧುನೀಕರಣ ಮತ್ತು ಮದ್ಯಮ ನೀರಾವರಿ ಯೋಜನಾ ವೃತ್ರದ ಅಧೀಕ್ಷಕ ಅಭಿಯಂತರ ಕೆ.ರಘುರಾಮನ್ ಮನವಿ ಮಾಡಿದ್ದಾರೆ.
ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 1,10,000 ಕ್ಯೂಸೆಕ್ಸ್ ಹಾಗೂ ಕಬಿನಿ ಜಲಾಶಯದಿಂದ ಈಗಾಗಲೇ 80,000 ಕ್ಯೂಸೆಕ್ಸ್ ಗೂ ಅಧಿಕ ನೀರನ್ನು ಬಿಡಲಾಗುತ್ತಿದೆ,ಈ ಪ್ರಮಾಣವು ಸುಮಾರು 2,00,000 ಕ್ಯೂಸೆಕ್ ಗಿಂತ ಹೆಚ್ಚಾಗುವ ಸಾಧ್ಯತೆ ಇದೆ.
ಆದ್ದರಿಂದ ಮಂಡ್ಯ, ಮೈಸೂರು, ಮತ್ತು ಚಾಮರಾಜನಗರ ಜಿಲ್ಲೆಯ ಜನರು ಹಾಗೂ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ಎರಡೂ ದಂಡೆಗಳಲ್ಲಿರುವ
ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಮುಂಜಾಗ್ರತೆಯಿಂದ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಕೋರಿದ್ದಾರೆ.
ಸಂಬಂಧಪಟ್ಟ ಜಿಲ್ಲಾಡಳಿತದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಕೆ.ರಘುರಾಮನ್ ತಿಳಿಸಿದ್ದಾರೆ.