Mon. Dec 23rd, 2024

ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ: ಸಿಸಿಬಿ ದಾಳಿ; ಮೂವರು ಮಹಿಳೆಯರ ರಕ್ಷಣೆ

Share this with Friends

ಮೈಸೂರು,ಜು.31: ವೇಶ್ಯಾವಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿ ಮಾಲೀಕರು ಹಾಗೂ ಕೆಲ ಗ್ರಾಹಕರನ್ನು ಬಂಧಿಸಿದ್ದಾರೆ.

ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಸೂಯೆಜ್ ಫಾರಂ ರಸ್ತೆಯಲ್ಲಿರುವ ಶ್ರೀ ಬ್ಯೂಟಿ ಪಾರ್ಲರ್ ಅಂಡ್ ಸ್ಪಾ ಸೆಂಟರ್ ನಲ್ಲಿ ವೇಶ್ಯಾವಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧಾರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಮೂವರು ಮಹಿಳೆಯರಿಗೆ ಹಣದ ಆಮಿಷ ತೋರಿಸಿ ವೇಶ್ಯಾವಟಿಕೆಗೆ ಬಳಸಿಕೊಂಡಿದ್ದುದು ಗೊತ್ತಾಗಿದೆ.

ಲಕ್ಷ್ಮಿ ಎಂಬುವರು ಈ ಸ್ಪಾ ಮಾಲೀಕಳಾಗಿದ್ದು ಲಕೋಟೆ ಎಂಬ ಆಪ್ ಮೂಲಕ ಗ್ರಾಹಕರನ್ನ ಸೆಳೆಯುತ್ತಿದ್ದರು, ಆನ್ ಲೈನ್ ನಲ್ಲೇ ಗ್ರಾಹಕರಿಂದ ಹಣ ವಸೂಲಿ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ‌ ಗೊತ್ತಾಗಿದೆ.

ಸ್ಪಾ ಮಾಲೀಕಳಾದ ಲಕ್ಷ್ಮಿಯನ್ನು ಬಂಧಿಸಲಾಗಿದೆ, ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


Share this with Friends

Related Post