ಮಂಡ್ಯ,ಆ.1: 1991ರ ಇತಿಹಾಸ ಮರುಕಳಿಸಿದೆ ಬ್ರಿಟಿಷರ ಕಾಲದಲ್ಲಿ ಕಟ್ಟಿದ ವೆಲೆಸ್ಲಿ ಸೇತುವೆ ಮೇಲೆ ಕಾವೇರಿ ನೀರು ನಿರಂತರವಾಗಿ ಹರಿಯುತ್ತಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಲೇ ಇದೆ.
ಜುಲೈ 31 ರ ಮಧ್ಯಾಹ್ನ 12 ಗಂಟೆಯಿಂದಲೇ ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಹಾಗಾಗಿ ಕಾವೇರಿ ನದಿ ಪಾತ್ರದಲ್ಲಿನ ಜನರು ಸ್ವಯಂ ಮುಂಜಾಗ್ರತೆ ವಹಿಸಬೇಕು, ಕಾವೇರಿ ನದಿ ಪಾತ್ರ ಹಾಗೂ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇದಿಸಲಾಗಿದೆ.
ನದಿಪಾತ್ರದಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿರುವ ರೈತರು ಕೃಷಿ ಚಟುವಟಿಕೆಗಳಿಗೆ ಹೋಗಬಾರದು ಮತ್ತು ಜಾನುವಾರುಗಳನ್ನು ಬಿಡದಬಾರದು.
ಜತೆಗೆ ನದಿಪಾತ್ರ ಮತ್ತು ಸೇತುವೆ ಇನ್ನಿತರ ಪ್ರೇಕ್ಷಣಿಯ ಸ್ಥಳಗಳಿಗೆ ಪ್ರವಾಸಿ ಗರು ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಫಿ ತೆಗೆಯುವುದನ್ನು ಜಿಲ್ಲಾಡಳಿತ ಕಡ್ಡಾಯವಾಗಿ ನಿಷೇಧಿಸಿದೆ.