Mon. Dec 23rd, 2024

ಕಾಂಗ್ರೆಸ್‌ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆಗೆ ಚಾಲನೆ

Share this with Friends

ಬೆಂಗಳೂರು ಆ.3: ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧದ ಮೈಸೂರು ಚಲೋ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಲಾಗಿದ್ದು, ಸಹಸ್ರಾರು ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಂಡಿದ್ದಾರೆ.

ಡೋಲು,ಡಕ್ಕೆ‌ ಬಾರಿಸಿ, ದೀಪ ಬೆಳಗಿಸಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು.

ಪಾದಯಾತ್ರೆ‌ ಉದ್ಘಾಟನೆ ವೇಳೆ ಮಾಜಿ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ,ಬಸವರಾಜ ಬೊಮ್ಮಾಯಿ,
ಡಿ.ವಿ.ಸದಾನಂದಗೌಡ,
ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿ,ಶೋಭಾ ಕರಂದ್ಲಾಜೆ, ವಿ. ಸೋಮಣ್ಣ,
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಉಸ್ತುವಾರಿ ಡಾ ರಾಧಾ ಮೋಹನ್ ದಾಸ್ ಅಗರ್ವಾಲ್, ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವಥ್ ನಾರಾಯಣ್,
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ. ಟಿ ದೇವೇಗೌಡ,ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಸಂಸದರು, ಶಾಸಕರು, ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.


Share this with Friends

Related Post