Mon. Dec 23rd, 2024

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ, ಮೂವರ ಸಾವು

Bengaluru-Mysore Expressway
Share this with Friends

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ ವೇನಲ್ಲಿ ಲಾರಿ ಹಾಗೂ ಟಿಟಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿ, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಟಿಟಿ ವಾಹನದಲ್ಲಿದ್ದ ಪ್ರಯಾಣಿಕರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಹತ್ತಿರ ಟಿಟಿ ವಾಹನವು ಲಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪೆಟ್ಟಿಗೆ ಅಂಗಡಿಯಲ್ಲಿ ಮಕ್ಕಳಿಗೆ ಚಾಕೊಲೇಟ್​ ಖರೀದಿಸಿದ ಯಶ್​ ಫೋಟೋ ವೈರಲ್​


Share this with Friends

Related Post