Sat. Apr 19th, 2025

ಚಿರತೆ ದಾಳಿ: ರೈತನಿಗೆ ಗಂಭೀರ ಗಾಯ

Share this with Friends

ಮೈಸೂರು.4: ಚಿರತೆ‌ ದಾಳಿಯಿಂದ ಜಮೀನಿನಲ್ಲಿ ಮೇವು ಕಟಾವು ಮಾಡಲು ಹೋಗಿದ್ದ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸವಣ್ಣ ಚಿರತೆ ದಾಳಿಯಿಂದ ಗಾಯಗೊಂಡಿದ್ದಾರೆ,ಅವರು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಂಧುವಳ್ಳಿ ಗ್ರಾಮದ ಸುತ್ತಮುತ್ತ ಚಿರತೆ ಮತ್ತು ಕಾಡುಪ್ರಾಣಿಗಳ ಕಾಟ ಹೆಚ್ಚಾಗಿದ್ದು,ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಚಿರತೆ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.


Share this with Friends

Related Post