Sat. Apr 19th, 2025

ಪರಶುರಾಮ್‌ ಪತ್ನಿಗೆ ಸರ್ಕಾರಿ ಕೆಲಸ, ಪರಿಹಾರ: ಪರಮೇಶ್ವರ್‌

Share this with Friends

ಬೆಂಗಳೂರು,ಆ.4: ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಸರ್ಕಾರಿ ಇಲಾಖೆಯಲ್ಲಿ ಕೆಲಸ, ಪರಿಹಾರ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಗೃಹಸಚಿವ ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಲಿನ ಆಡಳಿತ ಪಕ್ಷದ ಶಾಸಕರ ಮೇಲೆ ಆಪಾದನೆ ಮಾಡಿದ್ದಾರೆ. ಸಿಐಡಿ ತನಿಖೆಗೆ ಪ್ರಕರಣವನ್ನು ಕೊಟ್ಟಿದ್ದೇವೆ ತನಿಖೆ ನಡೆಯಲಿ ಎಂದರು.

ಇದು ಆತ್ಮಹತ್ಯೆ ಅಲ್ಲ, ಅಂತ ಪೊಲೀಸ್ ಇಲಾಖೆ ಹೇಳಿದೆ,ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ಕಾರಣ ಗೊತ್ತಾಗುತ್ತೆ ಎಂದು ಹೇಳಿದರು.

ಪರಶುರಾಮ್‌ ಪತ್ನಿಗೆ ಇಲಾಖೆಯಲ್ಲಿ ಕೆಲಸ ಮತ್ತು ಪರಿಹಾರ ಕೊಡೋದಕ್ಕೆ ನಮ್ಮ ಸರ್ಕಾರ ತೀರ್ಮಾನ ಮಾಡಿದೆ ಎಂದು ತಿಳಿಸಿದರು.


Share this with Friends

Related Post