Fri. Nov 1st, 2024

ನಂಜುಂಡೇಶ್ವರನ ಹುಂಡಿ ಎಣಿಕೆ:ಒಂದು ತಿಂಗಳಲ್ಲಿ ಕೋಟಿಗೂ ಹೆಚ್ಚು ಹಣ ಸಂಗ್ರಹ

Share this with Friends

ನಂಜನಗೂಡು,ಆ.7: ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ ಕೇವಲ ಒಂದು ತಿಂಗಳಲ್ಲಿ 1,12,92,056 ರೂ ಹಣ ಸಂಗ್ರಹವಾಗಿದೆ.

ಎಣಿಕೆ ಕಾರ್ಯ ದಾಸೋಹ ಭವನದಲ್ಲಿ ನಡೆಯಿತು. 35 ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು 1,12,92,056 ರೂ ಹಣ ಸಂಗ್ರಹವಾಗಿದೆ.

ಹುಂಡಿ ಎಣಿಕೆ ವೇಳೆ ಭಕ್ತರು ದೇವಾಲಯದಲ್ಲಿರುವ ಅವ್ಯವಸ್ಥೆಯ ಬಗ್ಗೆ ಬರೆದಿರುವ ಪತ್ರಗಳು ದೊರೆತಿವೆ.

ಜೊತೆಗೆ 51 ಗ್ರಾಂ 380 ಮಿಲಿಗ್ರಾಂ ಚಿನ್ನ, 1 ಕೆಜಿ 800 ಗ್ರಾಂ ಬೆಳ್ಳಿ, 46 ವಿದೇಶಿ ಕರೆನ್ಸಿಗಳು ನಂಜುಂಡನಿಗೆ ಕಾಣಿಕೆಯಾಗಿ ಬಂದಿದೆ.

50 ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದರು.

ಜಿಲ್ಲೆಯ ಪ್ರಮುಖ ದೇಗುಲಗಳ ಪೈಕಿ ನಂಜುಂಡೇಶ್ವರನ ದೇಗುಲವೂ ಒಂದು,
ಕೇರಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಉತ್ತರ ಭಾರತ ಮತ್ತು ದೇಶ ವಿದೇಶದಿಂದ ಬರುವವರ ಸಂಖ್ಯೆ ಹೆಚ್ಚಿದೆ.
ಇದರ ಪರಿಣಾಮ ಹುಂಡಿಯಲ್ಲಿ ದಾಖಲೆ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.

ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಎಇಒ ಸತೀಶ್, ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್ ಪ್ರಸಾದ್, ಗುರು ಮಲ್ಲಯ್ಯ, ಮುಜರಾಯಿ ತಹಶೀಲ್ದಾರ್ ವಿದ್ಯುಲತಾ, ಕೆನರಾ ಬ್ಯಾಂಕ್ ಸಿಬ್ಬಂದಿ ಭಾಗವಹಿಸಿದ್ದರು.


Share this with Friends

Related Post