Fri. Nov 1st, 2024

ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

Share this with Friends

ನವದೆಹಲಿ,ಆ.8: ವಕ್ಫ್ ಬೋರ್ಡ್‌ ಅಧಿಕಾರವನ್ನು ಕಡಿಮೆ ಮಾಡುವ ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ.

ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ಖಾತೆಯ ಸಚಿವ ಕಿರಣ್‌ ರಿಜುಜು ಅವರು ಮಸೂದೆಯನ್ನು ಪ್ರತಿಪಕ್ಷಗಳ ಗದ್ದಲದ ನಡುವೆ ಮಂಡಿಸಿದರು. ಈ ಮಸೂದೆ ಈಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.

ಪ್ರಸ್ತುತ ವಕ್ಫ್ ಬೋರ್ಡ್ ಹೊಂದಿರುವ ಏಕಪಕ್ಷೀಯ ಅಧಿಕಾರಗಳನ್ನು ಕಡಿಮೆ ಮಾಡಲು ಕೇಂದ್ರ ಉದ್ದೇಶಿಸಿದೆ. ಹಿಂದಿನ ಕಾಯ್ದೆಯಲ್ಲಿ ವಕ್ಫ್‌ ಬೋರ್ಡ್‌ಗೆ ಹೆಚ್ಚಿನ ಅಧಿಕಾರ ನೀಡಿತ್ತು.

ಇದರ ಪ್ರಕಾರ ಭೂಮಿಯನ್ನು ವಕ್ಫ್ ಬೋರ್ಡ್‌ನಿಂದ ಹಿಂಪಡೆಯುವುದು ಅಸಾಧ್ಯವಾಗಿತ್ತು. ಇದಾದ ನಂತರ ವಕ್ಫ್ ಬೋರ್ಡ್ ತೆಗೆದುಕೊಳ್ಳುವ ನಿರ್ಣಯಗಳು ಪದೇ ಪದೇ ವಿವಾದಕ್ಕೆ ಕಾರಣವಾಗುತ್ತಿದ್ದವು. ಇದನ್ನು ತಡೆಯುವುದಕ್ಕಾಗಿಯೇ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.

ಮಸೂದೆಗೆ ಸಂಸತ್ ಅನುಮೋದನೆ ನೀಡಿದಲ್ಲಿ ಮುಂದೆ ಯಾವುದೇ ಆಸ್ತಿಯನ್ನು ಇದು ತನ್ನದು ಎಂದು ಘೋಷಿಸಿಕೊಳ್ಳಲು ವಕ್ಫ್‌ಬೋರ್ಡ್‌ಗೆ ಸಾಧ್ಯವಾಗುವುದಿಲ್ಲ.

ಯಾವುದೇ ವಕ್ಫ್ ಆಸ್ತಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೋಂದಣಿಯನ್ನು ಕಡ್ಡಾಯಗೊಳಿಸಲು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ, ಇದರಿಂದ ಆಸ್ತಿ ಮೌಲ್ಯಮಾಪನ ಮಾಡಬಹುದು.

ಒಮ್ಮೆ ಜಿಲ್ಲಾಧಿಕಾರಿಗಳು ನಿರ್ಧರಿಸಿದ ನಂತರ ಅವರು ಕಂದಾಯ ದಾಖಲೆಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬಹುದು ಮತ್ತು ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಬಹುದು.

ಜಿಲ್ಲಾಧಿಕಾರಿ ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವವರೆಗೆ ಅಂತಹ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಪರಿಗಣಿಸಲಾಗುವುದಿಲ್ಲ ಎಂದು ತಿದ್ದುಪಡಿ ಮಸೂದೆ ಹೇಳುತ್ತದೆ.


Share this with Friends

Related Post