ಬೆಂಗಳೂರು, ಆ.8: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್ ಎಗೆ ಸಂಬಂಧಿಸಿದ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ದಾದಿಯರನ್ನು ನೇಮಕ ಮಾಡಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿದರು.
650 ಸಹಾಯಕ ಪ್ರಾಧ್ಯಾಪಕರು ಮತ್ತು ಸಾವಿರದ ಇನ್ನೂರು ದಾರಿಯನ್ನು ತಕ್ಷಣವೇ ನೇಮಕ ಮಾಡಿ ಕೊಳ್ಳಲು ಪ್ರಕ್ರಿಯೆ ಪ್ರಾರಂಭಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಈ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ನಡೆಸಿ ಹುದ್ದೆ ಬರ್ತಿ ಮಾಡಬೇಕೆಂದು ನಿರ್ದೇಶನ ನೀಡಿದ್ದೇನೆ ಎಂದು ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.