Mon. Dec 23rd, 2024

ತುಂಗಭದ್ರಾ ಜಲಾಶಯ ಪಾತ್ರದರೈತರಿಗೆ ತೊಂದರೆಯಾಗದಂತೆ ಕ್ರಮ: ಸಿಎಂ

Share this with Friends

ಕೊಪ್ಪಳ, ಆಗಸ್ಟ್ 13: ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯ ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಜಲಾಶಯ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮುಖ್ಯ ಮಂತ್ರಿಗಳು ಮಾತನಾಡಿದರು.

ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಬಿಜೆಪಿಯವರು ಆರೋಪಿಸಿದೆಯಲ್ಲಾ ಎಂಬ ಪ್ರಶ್ನೆಗೆ,ಅವರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ, ಇದು ರಾಜಕೀಯ ಮಾಡುವ ವಿಷಯವಲ್ಲ ಎಂದು ಹೇಳಿದರು.

ತುಂಗಭದ್ರಾ ಮಂಡಳಿಯ ನೇತೃತ್ವವನ್ನು ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು ನಿರ್ವಹಿಸುತ್ತಾರೆ. ಆಂಧ್ರ, ಕರ್ನಾಟಕ, ತೆಲಂಗಾಣ ರಾಜ್ಯದ ಸದಸ್ಯರು ಮಂಡಳಿಯಲ್ಲಿರುತ್ತಾರೆ, ಈ ಜಲಾಶಯದ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಮಂಡಳಿಗೆ ಸೇರಿರುತ್ತದೆ, ಆದರೆ ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ ಎಂದು ಸಿದ್ದು ತಿಳಿಸಿದರು.

ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 105 ಟಿಎಂಸಿ ನೀರು ತುಂಬಿತ್ತು. ಆದರೆ ತುಂಡಾಗಿರುವ ಗೇಟ್ ನ ದುರಸ್ತಿಗಾಗಿ 50 ರಿಂದ 60 ಟಿಎಂಸಿ ನೀರು ಹೊರಗೆ ಬಿಡಬೇಕಾಗಿದೆ. ಈ ವರ್ಷದ ಅಕ್ಟೋಬರ್ ವರೆಗೆ ಮಳೆಯಾಗಲಿದ್ದು, ಜಲಾಶಯದಲ್ಲಿ ಪುನ: ನೀರು ತುಂಬುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಸಚಿವ ಶಿವರಾಜ್ ತಂಗಡಗಿ ಹಾಗೂ ಸ್ಥಳೀಯ ಶಾಸಕರು,ಮುಖಂಡರು ಹಾಜರಿದ್ದರು.


Share this with Friends

Related Post